ರಾಷ್ಟ್ರೀಯ ಸುದ್ದಿ

ತ್ರಿವಳಿ ತಲಾಖ್ ರದ್ದತಿಗೆ ಹೋರಾಡಿದ್ದ ಶಾಹಿರಾ ಬಾನುಗೆ ಮಹಿಳಾ ಆಯೋಗದ ಉಪಾಧ್ಯಕ್ಷೆ ಹುದ್ದೆ ನೀಡಿದ ಬಿಜೆಪಿ

ವರದಿಗಾರ (ಅ.21) ತ್ರಿವಳಿ ತಲಾಖ್ ರದ್ದು ಪಡಿಸುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ಪ್ರಮುಖ ಅರ್ಜಿದಾರರಾದ ಶಾಹಿರಾ ಬಾನು ಅವರು ಬಿಜೆಪಿ ಸೇರಿದ 10 ದಿನಗಳಲ್ಲೇ ರಾಜ್ಯ ಸಚಿವ ಸ್ಥಾನಮಾನದ ಉತ್ತರಾಖಂಡ್ ರಾಜ್ಯ ಮಹಿಳಾ ಆಯೋಗದ ಉಪಾಧ್ಯಕ್ಷೆಯನ್ನಾಗಿ ನೇಮಿಸಲಾಗಿದೆ.

ಬಾನು ಹೊರತುಪಡಿಸಿ, ಇನ್ನಿಬ್ಬರು ಮಹಿಳೆಯರಿಗೆ ಸಚಿವ ಸ್ಥಾನಮಾನದ ಹುದ್ದೆಗಳನ್ನು ನೀಡಲಾಗಿದೆ. ಮೂವರನ್ನೂ ರಾಜ್ಯ ಮಹಿಳಾ ಆಯೋಗದ ಉಪಾಧ್ಯಕ್ಷರನ್ನಾಗಿ ಮಾಡಲಾಗಿದೆ.

ಷಾಹಿರಾ ಬಾನು, ಜ್ಯೋತಿ ಷಾ, ಪುಷ್ಪ ಪಾಸ್ವಾನ್ ಅವರರನ್ನು ಉತ್ತರಾಖಂಡ ರಾಜ್ಯ ಮಹಿಳಾ ಆಯೋಗದ ಉಪಾಧ್ಯಕ್ಷರಾಗಿ ರಾಜ್ಯ ಸರ್ಕಾರ ಮಂಗಳವಾರ ನೇಮಿಸಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ತ್ರೀವೇಂದ್ರ ಸಿಂಗ್ ರಾವತ್ ಮಾತನಾಡಿ, ಈ ನೇಮಕಾತಿಗಳು ಮಹಿಳೆಯರ ಸಮಸ್ಯೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಪರಿಹರಿಸಲು ಹಾಗೂ ಆಯೋಗದಲ್ಲಿ ಬಾಕಿ ಇರುವ ಎಲ್ಲಾ ವಿವಾದಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ನೆರವಾಗಲಿವೆ ಎಂದು ಹೇಳಿದ್ದಾರೆ.

ಉತ್ತರಾಖಂಡದ ಉದಮ್ ಸಿಂಗ್ ನಗರ ಜಿಲ್ಲೆಯ ಷಾಹಿರಾ ಬಾನು ಅವರಿಗೆ, ಅವರ ಪತಿ ಸ್ಪೀಡ್ ಪೋಸ್ಟ್ ಮೂಲಕ ವಿಚ್ಚೇಧನ ನೀಡಿದ್ದರು.ನಾಲ್ಕುತಿಂಗಳ ನಂತರ, ಅಂದರೆ, 2014 ರಲ್ಲಿ, ದಿಢೀರ್ ತ್ರಿವಳಿ ತಲಾಖ್ ವಿರುದ್ಧ ಅವರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇತರ ಆರ್ಜಿಗಳೊಂದಿಗೆ ಈ ಆರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿ, ದಿಢೀರ್ ತ್ರಿವಳಿ ತಲಾಖ್ ನೀಡುವುದು ಅಸಂವಿಧಾನಿಕ ಕ್ರಮ ಎಂದು 2017 ರಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿತು. ತರುವಾಯ, ಕೇಂದ್ರ ಸರ್ಕಾರ ಮುಸ್ಲಿಂ ಮಹಿಳಾ ವಿವಾಹ ಹಕ್ಕುಗಳ ಸಂರಕ್ಷಣಾ ಕಾಯ್ದೆ, 2019 ಅನ್ನು ಜಾರಿಗೆ ತಂದಿತ್ತು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group