ರಾಷ್ಟ್ರೀಯ ಸುದ್ದಿ

ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆದ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ

ವರದಿಗಾರ (ಅ.21) ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದ್ದಾರೆ. ನಿನ್ನೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿಯಾದ ಬಳಿಕ ರಾಜ್ಯಪಾಲರೊಂದಿಗೆ ಹಲವು ವಿಷಯಗಳನ್ನು ಚರ್ಚಿಸಿದ್ದೇನೆ, ರಾಜ್ಯದಲ್ಲಿ ನಡೆಯುತ್ತಿರುವ ಲವ್ ಜಿಹಾದ್ ಬಗ್ಗೆಯೂ ಪ್ರಸ್ತಾಪಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದರು.

ಇದಕ್ಕೆ ಹಲವರು ಸಾಮಾಜಿಕ ಖಾತೆಯಲ್ಲಿ ಟೀಕಾಪ್ರಹಾರ ನಡೆಸಿ, ಶರ್ಮಾ ಅವರ ಹಳೆಯ ಟ್ವೀಟ್ ಗಳನ್ನು ಪೋಸ್ಟ್ ಮಾಡಿ ಜನ್ಮ ಜಾಲಾಡಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಸಂಸತ್ತಿನಲ್ಲಿ ದೇಶದಲ್ಲಿ ಇದುವರೆಗೂ ಯಾವುದೇ ಲವ್ ಜಿಹಾದ್ ನಡೆದಿಲ್ಲ ಎಂದು ಹೇಳಿದ್ದು, ಕಾನೂನಿನಡಿಯಲ್ಲಿ ಈ ಪದವನ್ನು ವ್ಯಾಖ್ಯಾನಿಸಿಲ್ಲ ಎಂದು ಹಲವರು ಶರ್ಮಾ ಅವರಿಗೆ ತಿರುಗೇಟು ನೀಡಿದ್ದಾರೆ.

ರೇಖಾ ಶರ್ಮಾ ಈ ಹಿಂದೆ ಮಾಡಿದ್ದ ಅವಹೇಳನಕಾರಿ ಮತ್ತು ಮಹಿಳೆಯರ ವಿರುದ್ಧವೇ ನಿಂದನಾತ್ಮಕ ಹಾಗೂ ದ್ವೇಷ ಕಾರುವ ಟ್ವೀಟ್‌ಗಳನ್ನು ನೆಟ್ಟಿಗರು ಈಗ ಹಂಚಿಕೊಂಡು ಅವರನ್ನು ಟ್ರೋಲ್ ಮಾಡಿದ್ದಾರೆ.

“ಇಂತಹ ಅತಿರೇಕದ ಟ್ವೀಟ್‌ಗಳನ್ನು ಮಾಡಿದ್ದವರು ಇಂದು ಮಹಿಳೆಯರ ಸುರಕ್ಷತೆ ಬಗ್ಗೆ, ಲವ್ ಜಿಹಾದ್ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದೂ, ಅವರು ಈ ಹುದ್ದೆಗೆ ರಾಜೀನಾಮೆ ನೀಡಬೇಕು” ಎಂದೂ ಹಲವು ಮಂದಿ ಒತ್ತಾಯಿಸಿದ್ದಾರೆ. #SackRekhaSharma ಎಂಬ ಹ್ಯಾಶ್‌ಟ್ಯಾಗ್‌ ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್ ಆಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group