ರಾಜ್ಯ ಸುದ್ದಿ

ಕಾಂಗ್ರೆಸ್ ಮಾಜಿ ಶಾಸಕ ಮೊಯಿದ್ದೀನ್ ಬಾವಗೆ ಬೆದರಿಕೆ ಕರೆ

ವರದಿಗಾರ (ಅ.21) ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವಾ ಅವರಿಗೆ ಮುಂಬೈನಿಂದ ಅನಾಮದೇಯ ವ್ಯಕ್ತಿ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ. ಸ್ವತಃ ಮೊಯಿದ್ದೀನ್ ಬಾವಾ ಅವರು ವಿಡಿಯೋ ಮೂಲಕ ಘಟನೆಯನ್ನು ವಿವರಿಸಿದ್ದಾರೆ.

ದೇವಸ್ಥಾನದ ಧಾರ್ಮಿಕ ಕಾರ್ಯ ಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಬಾವಾಗೆ ಮುಂಬೈನಿಂದ ಬೆದರಿಕೆ ಕರೆ ಬಂದಿದೆ. ಬೆದರಿಕೆ ಕರೆ ಮಾಡಿದಾತ, ತುಳು ಭಾಷೆಯಲ್ಲಿ ಮಾತನಾಡಿದ್ದು, ಇದು ನೆಹರು ದೇಶವಲ್ಲ, ಮೋದಿ ದೇಶ. ದನ ತಿಂದು ಮತ್ತೊಮ್ಮೆ ದೇವಸ್ಥಾನಕ್ಕೆ ಹೋದರೆ ಹುಷಾರ್ ಎಂದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಮಂಗಳೂರು ಹೊರವಲಯದ ಬಜ್ಪೆ ಸುಂಕದ ಕಟ್ಟಯ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ವಿಶೇಷ ಪೂಜೆ ಸಲ್ಲಿಕೆ ಕಾರ್ಯಕ್ರಮದಲ್ಲಿ ಮೊಯ್ದೀನ್ ಬಾವಾ ಭಾಗವಹಿಸಿದ್ದರು. ಅವರು ದೇವಸ್ಥಾನದಲ್ಲಿ ಪೂಜೆಗೆ ಭಾಗವಹಿಸಿದ ಪೋಟೋ ವೈರಲ್ ಆಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group