ರಾಷ್ಟ್ರೀಯ ಸುದ್ದಿ

ಸಿಬಿಐಗೆ ನೀಡಿದ್ದ ಸಾಮಾನ್ಯ ಅನುಮತಿ ಹಿಂಪಡೆದುಕೊಂಡ ಮಹಾರಾಷ್ಟ್ರ ಸರ್ಕಾರ

Uddhav-Thackeray

ವರದಿಗಾರ (ಅ.22) ರಾಜ್ಯದಲ್ಲಿ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ‘ಸಾಮಾನ್ಯ ಒಪ್ಪಿಗೆ’ಯನ್ನು ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರಕಾರ ಬುಧವಾರ ಹಿಂತೆಗೆದುಕೊಂಡಿದೆ. ಇನ್ನು ಮುಂದೆ ರಾಜ್ಯಕ್ಕೆ ಸಂಬಂಧಿಸಿದ ಯಾವುದೇ ಪ್ರಕರಣವನ್ನು ಸಿಬಿಐ ನೇರವಾಗಿ ಕೈಗೆತ್ತಿಕೊಳ್ಳುವಂತಿಲ್ಲ.

ರಾಜ್ಯಕ್ಕೆ ಸಂಬಂಧಿಸಿದ ಯಾವುದೇ ತನಿಖೆಯನ್ನು ನಡೆಸುವ ಮೊದಲು ಸಿಬಿಐಗೆ ರಾಜ್ಯ ಸರ್ಕಾರದ ಅನುಮತಿ ಬೇಕಾಗುತ್ತದೆ.
ಬಿಜೆಪಿಯೇತರ ರಾಜ್ಯಗಳಾದ ರಾಜಸ್ಥಾನ, ಚತ್ತೀಸ್‌ಗಡ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು ಈಗಾಗಲೇ ಸಿಬಿಐ ತಮ್ಮ ವ್ಯಾಪ್ತಿಯಲ್ಲಿನ ಪ್ರಕರಣಗಳನ್ನು ತನಿಖೆ ಮಾಡಲು ಅವಕಾಶ ನೀಡುವ ಸಾಮಾನ್ಯ ಒಪ್ಪಿಗೆಯನ್ನು ಈಗಾಗಲೇ ಹಿಂಪಡೆದುಕೊಂಡಿದೆ.

ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರದಿಂದ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ಸಿಬಿಐ ತನಿಖೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಏಕೆಂದರೆ ಈ ತನಿಖೆ ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ ನಡೆಯುತ್ತಿದೆ. ರಾಜ್ಯವು ತನ್ನ ಒಪ್ಪಿಗೆಯನ್ನು ನೀಡುವ ಅಗತ್ಯವಿರುವುದಿಲ್ಲ.

ಟಿಆರ್ ಪಿ ಪ್ರಕರಣಕ್ಕೆ ಸಂಬಂಧಿಸಿದ ಒಂದು ಅಂಶದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ಎಪ್ಐಆರ್ ದಾಖಲಿಸಿ, ಸಿಬಿಐಗೆ ವರ್ಗಾಯಿಸಲು ನಿರ್ಧರಿಸಿದ ಒಂದು ದಿನದ ಬಳಿಕ ಮಹಾರಾಷ್ಟ್ರ ಗೃಹ ಸಚಿವಾಲಯ ಬುಧವಾರ ಈ ಆದೇಶ ಹೊರಡಿಸಿದೆ. ರಿಪಬ್ಲಿಕ್ ಟಿವಿ ವಿರುದ್ಧ ಮುಂಬೈ ಪೊಲೀಸರು ನಡೆಸುತ್ತಿರುವ ತನಿಖೆಯನ್ನು ದುರ್ಬಲಗೊಳಿಸಲು ಉತ್ತರ ಪ್ರದೇಶ ಸರ್ಕಾರ ಪ್ರಯತ್ನಿಸಲಿದೆ ಎಂಬ ಆತಂಕದಿಂದ ಮಹಾರಾಷ್ಟ್ರ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group