ಹನಿ ಸುದ್ದಿ

ಉತ್ತರ ಪ್ರದೇಶ: ಹದಿನೈದು ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ಇಬ್ಬರ ಬಂಧನ

ವರದಿಗಾರ (ಅ.22) ಉತ್ತರ ಪ್ರದೇಶದ ರಾಮ್ ಪುರ ಜಿಲ್ಲೆಯ ಕೆಮ್ರಿ ಪ್ರದೇಶದಲ್ಲಿ 15 ವರ್ಷ ಪ್ರಾಯದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ವೆಸಗಿದ ಘಟನೆ ನಡೆದಿದ್ದು, ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರಕ್ಕೊಳಗಾದ 15 ವರ್ಷದ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಳು. ಆಕೆಯ ತಾಯಿ ತಂದೆ ಕೆಲಸಕ್ಕೆ ಹೋಗಿದ್ದರು ಎನ್ನಲಾಗಿದೆ. ಭಟ್ಪುರ ತರಣ್ ನಿವಾಸಿಗಳಿಬ್ಬರು ಬಾಲಕಿಯನ್ನು ಅಪಹರಿಸಿ ಹತ್ತಿರದ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾರೆ. ಸದ್ಯ ಇಬ್ಬರು ಕಾಮುಕರನ್ನು ಬಂಧಿಸಲಾಗಿದ್ದು, ಆರೋಪಿಗಳ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group