ರಾಷ್ಟ್ರೀಯ ಸುದ್ದಿ

ನೋಟು ಅಮಾನ್ಯೀಕರಣದ ವೇಳೆ 2000 ಕೋಟಿ ರೂ. ಅಕ್ರಮ ಹಣ ವರ್ಗಾವಣೆ; ಮಾಜಿ ಐಟಿ ಅಧಿಕಾರಿ, ಬಿಜೆಪಿ ಮುಖಂಡ ಪಿವಿಎಸ್ ಶರ್ಮಾ

ವರದಿಗಾರ (ಅ.22) ನೋಟು ಅಮಾನ್ಯೀಕರಣದ ಸಂದರ್ಭದಲ್ಲಿ ದೊಡ್ಡ ಚಿನ್ನಾಭರಣ ವ್ಯಾಪಾರಿಗಳು, ಬಿಲ್ಡರ್ ಗಳು, ಜವಳಿ ಮತ್ತು ವಜ್ರ ಕೈಗಾರಿಕೋದ್ಯಮಿಗಳಿಂದ 2,000 ಕೋಟಿ ರೂ.ಗಳ ಅಕ್ರಮ ಹಣ ವರ್ಗಾವಣೆ ಹಗರಣ ನಡೆದಿದೆ ಎಂದು ಆದಾಯ ತೆರಿಗೆ ಇಲಾಖೆಯಿಂದ ಹದಿನೈದು ವರ್ಷಗಳ ಹಿಂದೆ ನಿವೃತ್ತಿ ಹೊಂದಿ ಬಿಜೆಪಿಗೆ ಸೇರಿರುವ ಮಾಜಿ ಆದಾಯ ತೆರಿಗೆ ಅಧಿಕಾರಿ ಪಿವಿಎಸ್ ಶರ್ಮಾ ಆರೋಪಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಹಗರಣದ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ಇಲಾಖೆ (ಇಡಿ) ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.
2016ರ ನವೆಂಬರ್‌ನಲ್ಲಿ ನರೇಂದ್ರ ಮೋದಿ ಸರ್ಕಾರ ಪ್ರಾರಂಭಿಸಿದ ಆದಾಯ ಘೋಷನೆ ಯೋಜನೆಯ (ಐಡಿಎಸ್) ಉದ್ದೇಶವನ್ನು ನಿಷ್ಟ್ರಯೋಜಕಗೊಳಿಸಿದ ಬಹುಕೋಟಿ ನೋಟು ಅಮಾನ್ಯೀಕರಣ ಹಗರಣದಲ್ಲಿ ಚಾರ್ಟರ್ಡ್ ಅಕೌಂಟೆಂಟ್‌ಗಳು (ಸಿಎ) ಮತ್ತು ಆದಾಯ ತೆರಿಗೆ ಅಧಿಕಾರಿಗಳ ಪಾಲುದಾರಿಕೆ ಇದೆ ಎಂದು ಅವರು ಆರೋಪಿಸಿದ್ದಾರೆ.

ಈ ಸಂಬಂಧ ಅಫಿದವಿತ್ ಸಲ್ಲಿಸಲು ತಾವು ಸಿದ್ಧವಿರುವುದಾಗಿ ಪಿವಿಎಸ್ ಶರ್ಮಾ ತಿಳಿಸಿದ್ದಾರೆ. 2016 ರ ನವೆಂಬರ್ 8 ರಂದು ನೋಟು ಅಮಾನ್ಯೀಕರಣ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ 96 ಕೋಟಿ ರೂ. ಮೌಲ್ಯದ ಆಭರಣ ಮತ್ತು ಚಿನ್ನವನ್ನು ಮಾರಾಟ ಮಾಡಿರುವ ಆಭರಣ ಸಂಸ್ಥೆಗೆ ಸಂಬಂಧಿಸಿದ ದಾಖಲೆಗಳನ್ನು ಅವರು ಟ್ವೀಟ್ ನಲ್ಲಿ ಅಪ್ ಲೋಡ್ ಮಾಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group