ರಾಷ್ಟ್ರೀಯ ಸುದ್ದಿ

ಕಂಗನಾ ವಿರುದ್ಧ ಮತ್ತೊಂದು ಕ್ರಿಮಿನಲ್ ಪ್ರಕರಣ: ಜೈಲಿಗೆ ಹೋಗಲು ಸಿದ್ಧ ಎಂದ ನಟಿ

ವರದಿಗಾರ (ಅ.23) ಬಾಲಿವುಡ್ ನಟಿ ಕಂಗನಾ ರಣಾವತ್ ಹಾಗೂ ಆಕೆಯ ಸಹೋದರಿ ರಂಗೋಲಿ ವಿರುದ್ಧ ಮುಂಬೈನ ಅಂಧೇರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಮತ್ತೊಂದು ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಗುರುವಾರ ವಕೀಲ ಅಲಿ ಕಾಶಿಫ್ ದೇಶ್ ಮುಖ್ ಎಂಬವರು ಕಂಗನಾ ಸಹೋದರಿಯರ ವಿರುದ್ಧ ಧಾರ್ಮಿಕ ವಿಷಯವಾಗಿ ಸಮುದಾಯಗಳ ನಡುವೆ ಕಲಹ, ದ್ವೇಷ ಹುಟ್ಟುಹಾಕುವುದು ಮತ್ತು ನ್ಯಾಯಾಂಗವನ್ನು ಅಪಹಾಸ್ಯ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟಿ ಕಂಗನಾ ಜೈಲಿಗೆ ಹೋಗಲು ಕಾಯುತ್ತಿರುವುದಾಗಿ ಹೇಳಿದ್ದಾರೆ. ಬಾಂದ್ರಾ ನ್ಯಾಯಾಲಯ, ಎಫ್ ಐ ಆರ್ ದಾಖಲಿಸಲು ಆದೇಶ ನೀಡಿದರೆ ಪಪ್ಪು ಸೇನಾ ಪದ ಬಳಸುವ ಮೂಲಕ ನ್ಯಾಯಾಲಯದ ವಿರುದ್ಧ ನಿಂದನಾತ್ಮಕ ಟ್ವೀಟ್ ಮಾಡಿದ್ದಾರೆ ಎಂದು ದೂರಿದ್ದಾರೆ. ಈ ಹಿಂದೆ ಕಂಗನಾ ಮತ್ತು ಸಹೋದರಿ ರಂಗೋಲಿ ಮಾಡಿರುವ ಟ್ವೀಟ್ ಗಳನ್ನು ಸಹ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಳೆದ ವಾರ ಮುಂಬೈನ ಬಾಂದ್ರಾದಲ್ಲಿ ದಾಖಲಾದ ಎಫ್ ಐ ಆರ್ ಬಳಿಕ ಕಂಗನಾ ವಿರುದ್ಧ ದಾಖಲಾಗುತ್ತಿರುವ ಎರಡನೇ ದೂರು ಇದಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಆಕೆ, ಮಹಾರಾಷ್ಟ್ರ ಸರ್ಕಾರ ತನ್ನನ್ನು ಜೈಲಿಗೆ ಕಳುಹಿಸಲು ನಿರ್ಧರಿಸಿದೆ. ನಾನು ಜೈಲಿಗೆ ಹೋಗಲು ಕಾಯುತ್ತಿದ್ದೇನೆ. ಇದು ನನ್ನ ಜೀವನಕ್ಕೆ ಒಂದು ಅರ್ಥವನ್ನು ನೀಡುತ್ತಿದೆ. ಜೈ ಹಿಂದ್” ಎಂದು ಬರೆದುಕೊಂಡಿದ್ದಾರೆ.
ಬಾಲಿವುಡ್ ನಟ ಅಮೀರ್ ಖಾನ್ ತಮ್ಮ ವಿಷಯದಲ್ಲಿ ಮೌನವಹಿಸಿದ್ದಾರೆ ಎಂದೂ ಕಂಗನಾ ದೂರಿದ್ದಾರೆ

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group