ರಾಷ್ಟ್ರೀಯ ಸುದ್ದಿ

ಬಿಹಾರದಲ್ಲಿ 19 ಲಕ್ಷ ಉದ್ಯೋಗ ಸೃಷ್ಟಿಯ ಭರವಸೆ: ಹಾಗಾದರೆ ಇದುವರೆಗೆ ನಿತೀಶ್ ಕುಮಾರ್ ಏನು ಮಾಡುತ್ತಿದ್ದರು; ರಾಹುಲ್ ಗಾಂಧಿ

ವರದಿಗಾರ (ಅ.23) ಬಿಹಾರದ 19 ಲಕ್ಷ ಯುವಕರಿಗೆ ಉದ್ಯೋಗ ನೀಡುವ ಬಿಜೆಪಿಯ ಭರವಸೆ ದಾರಿ ತಪ್ಪಿಸುವ ತಂತ್ರವಾಗಿದೆ ಎಂದು ಮಾಜಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ.

ಭಾಗಲಾಪುರ ಮತ್ತು ನಾವಡದಲ್ಲಿ ಮಹಾಮೈತ್ರಿ ಅಭ್ಯರ್ಥಿಗಳ ಪರ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಮತ್ತು ಬಿಹಾರದ ನಿತೀಶ್‌ ಕುಮಾರ್‌ ಸರ್ಕಾರ ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದಲ್ಲಿ ಆರ್ಥಿಕತೆಯನ್ನು ಸಂಪೂರ್ಣವಾಗಿ ನಾಶಗೊಳಿಸಿದ್ದು, ಯುವಕರಿಗೆ ಉದ್ಯೋಗ ಒದಗಿಸುವ ಯಾವುದೇ ಸಾಧ್ಯತೆಗಳಿಲ್ಲ ಎಂದರು.

2014ರ ಲೋಕಸಭಾ ಚುನಾವಣೆಗಳಲ್ಲಿ ಮೋದಿ ಭರವಸೆ ನೀಡಿದಂತೆ 2 ಕೋಟಿ ಯುವಕರಿಗೆ ಉದ್ಯೋಗ ದೊರೆತಿದೆಯೇ ಎಂಬುದರ ಕುರಿತು ಅವರನ್ನು ಪ್ರಶ್ನಿಸಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ದೇಶಕ್ಕೆ ಏನೂ ಮಾಡಿಲ್ಲ. ಈಗ ಎನ್‌ಡಿಎ 19 ಲಕ್ಷ ಉದ್ಯೋಗ ಒದಗಿಸುವ ಭರವಸೆ ನೀಡುತ್ತಿದೆ. ಹಾಗಿದ್ದಲ್ಲಿ ಇಲ್ಲಿಯವರೆಗೆ ಅವರೇನು ಮಾಡುತ್ತಿದ್ದರು ಎಂದು ಮತದಾರರು ಪ್ರಶ್ನಿಸಬೇಕು ಎಂದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group