ರಾಷ್ಟ್ರೀಯ ಸುದ್ದಿ

ಸಿಬಿಐಗೆ ನೀಡಿದ್ದ ಸಾಮಾನ್ಯ ಒಪ್ಪಿಗೆ ಹಿಂಪಡೆಯುವಿಕೆ: ಈಗ ಕೇರಳದ ಸರದಿ

ವರದಿಗಾರ (ಅ.25): ಸಿಬಿಐ ತನಿಖೆಗೆ ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು ಮಹಾರಾಷ್ಟ್ರ ಸರ್ಕಾರ ಹಿಂಪಡೆದ ಬೆನ್ನಲ್ಲೇ ಕೇರಳ ಸರ್ಕಾರ ಕೂಡ ಇದೇ ಮಾರ್ಗ ಅನುಸರಿಸಲು ಚಿಂತನೆ ನಡೆಸಿದೆ. ರಾಜ್ಯದಲ್ಲಿನ ಪ್ರಕರಣಗಳ ತನಿಖೆಗಾಗಿ ಸಿಬಿಐಗೆ ನೀಡಿರುವ ಸಾಮಾನ್ಯ ಒಪ್ಪಿಗೆಯನ್ನು ಹಿಂಪಡೆಯಲು ಕೇರಳ ಸರ್ಕಾರ ಮುಂದಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಆಡಳಿತಾರೂಢ ಎಲ್‌ಡಿಎಫ್, ಸಿಪಿಐ (ಎಂ) ಮತ್ತು ಸಿಪಿಐನ ಪ್ರಮುಖ ಘಟಕಗಳು, ಇತರ ಕೆಲವು ರಾಜ್ಯಗಳಂತೆ ಸಿಬಿಐ ತನಿಖೆಗೆ ನೀಡಿರುವ ಸಾಮಾನ್ಯ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿವೆ. ರಾಜ್ಯ ಕಾನೂನು ಸಚಿವ ಮತ್ತು ಸಿಪಿಐ ಹಿರಿಯ ನಾಯಕ ಎ. ಕೆ. ಬಾಲನ್ ಮಾತನಾಡಿ, ಅನೇಕ ರಾಜ್ಯಗಳು ಈಗಾಗಲೇ ಸಿಬಿಐಗೆ ಪ್ರಕರಣಗಳ ತನಿಖೆಗಾಗಿ ನೀಡಿದ್ದ ಸಾಮಾನ್ಯ ಒಪ್ಪಿಗೆಯನ್ನು ಹಿಂಪಡೆದುಕೊಂಡಿವೆ. ಸಿಪಿಐ (ಎಂ) ಮತ್ತು ಸಿಪಿಐ ಇದೇ ಬೇಡಿಕೆಯನ್ನು ಮುಂದಿಟ್ಟ ಕಾರಣ ಕೇರಳ ಸರ್ಕಾರ ಕೂಡ ಆ ಮಾರ್ಗಗಳ ಬಗ್ಗೆ ಯೋಚಿಸುತ್ತಿದೆ. ಏಜೆನ್ಸಿಗೆ ವಿಶ್ವಾಸಾರ್ಹತೆ ಇರುವ ದಿನಗಳಲ್ಲಿ ರಾಜ್ಯಗಳು ಸಿಬಿಐಗೆ ಸಾಮಾನ್ಯ ಒಪ್ಪಿಗೆ ನೀಡಿದ್ದವು. ಈಗ, ಸಿಬಿಐ ವಿಶ್ವಾಸಾರ್ಹತೆ ಕಳೆದುಕೊಂಡಿದ್ದು, ಬೇಡದ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಅವರು ಹೇಳಿದರು.

“ನಾವು ಕೇಂದ್ರ ಏಜೆನ್ಸಿಯ ಅಧಿಕಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ. ಅದೇ ಸಮಯದಲ್ಲಿ, ದೆಹಲಿ ವಿಶೇಷ ಪೊಲೀಸ್ ಸ್ಥಾಪನಾ ಕಾಯ್ದೆಯ ಸೆಕ್ಷನ್ 6 ರ ಪ್ರಕಾರ, ಸಿಬಿಐ ಪ್ರಕರಣ ದಾಖಲಿಸುವ ಮೊದಲು ಆಯಾ ರಾಜ್ಯಗಳಿಂದ ಒಪ್ಪಿಗೆ ಪಡೆಯಬೇಕು. ರಾಜ್ಯ ಸರ್ಕಾರದ ಆ ರಕ್ಷಣೆಯನ್ನು ಉಳಿಸಿಕೊಳ್ಳಲು ನಾವು ಬಯಸುತ್ತೇವೆ. ಈ ಹಿಂದೆ ಕಾರ್ಯನಿರ್ವಾಹಕ ಆದೇಶದ ಮೂಲಕ, ಪ್ರಕರಣಗಳನ್ನು ತನಿಖೆ ಮಾಡಲು ಸಿಬಿಐಗೆ ರಾಜ್ಯಗಳು ಸಾಮಾನ್ಯ ಒಪ್ಪಿಗೆ ನೀಡಿದ್ದವು. ಅನೇಕ ರಾಜ್ಯಗಳು ಆ ಒಪ್ಪಿಗೆಯನ್ನು ಹಿಂತೆಗೆದುಕೊಂಡಿವೆ, ಮತ್ತು ಆ ಆಯ್ಕೆಯು ಈಗ ಕೇರಳ ಸರ್ಕಾರದ ಮುಂದಿದೆ ಎಂದು ತಿಳಿಸಿದರು.

ಆದರೆ ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿತ್ತಲ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಅವ್ಯವಹಾರ ಮುಚ್ಚಿಹಾಕಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group