ರಾಷ್ಟ್ರೀಯ ಸುದ್ದಿ

ಹತ್ರಾಸ್ ಸಾಮೂಹಿಕ ಅತ್ಯಾಚಾರ: ತನಿಖಾಧಿಕಾರಿಯ ಪತ್ನಿ ಆತ್ಮಹತ್ಯೆ

Photo for representational purpose only.

ವರದಿಗಾರ (ಅ.25): ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ)ದಲ್ಲಿರುವ ಹಿರಿಯ ಪೊಲೀಸ್ ಅಧಿಕಾರಿಯ ಪತ್ನಿ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉನ್ನಾವೊ ಪೊಲೀಸ್ ತರಬೇತಿ ಕೇಂದ್ರದ ಡಿಐಜಿ ಚಂದ್ರ ಪ್ರಕಾಶ್ ಅವರ ಪತ್ನಿ ಪುಷ್ಪಾ ದೇವಿ(36) ಅವರ ಶವ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಚಂದ್ರಪ್ರಕಾಶ್ ಅವರು, ಹತ್ರಾಸ್ ನಲ್ಲಿ ಕಳೆದ ತಿಂಗಳು ನಡೆದ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದ ವಿಶೇಷ ತನಿಖಾ ತಂಡದ ಮೂವರು ಸದಸ್ಯರ ಪೈಕಿ ಒಬ್ಬರಾಗಿದ್ದಾರೆ.

ಡಿಐಜಿ ಚಂದ್ರ ಪ್ರಕಾಶ್ ಅವರ ಪತ್ನಿ ಪುಷ್ಪಾ ದೇವಿ ಅವರು ಲಖನೌನ ಸುಶಾಂತ್ ಗಾಲ್ಫ್ ಸಿಟಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಜಂಟಿ ಪೊಲೀಸ್ ಆಯುಕ್ತ(ಕಾನೂನು ಮತ್ತು ಸುವ್ಯವಸ್ಥೆ) ನವೀನ್ ಅರೋರಾ ತಿಳಿಸಿದ್ದಾರೆ. ಮನೆಯಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group