ರಾಷ್ಟ್ರೀಯ ಸುದ್ದಿ

ಉತ್ತರ ಪ್ರದೇಶದಂತೆ ಅತ್ಯಾಚಾರ ಸಂತ್ರಸ್ತ ಕುಟುಂಬಕ್ಕೆ ಪಂಜಾಬ್, ರಾಜಸ್ಥಾನ ಸರ್ಕಾರ ತಡೆ ಒಡ್ಡಿಲ್ಲ: ರಾಹುಲ್ ಗಾಂಧಿ ತಿರುಗೇಟು

ವರದಿಗಾರ (ಅ.25) ಉತ್ತರ ಪ್ರದೇಶದ ಮಾದರಿಯಲ್ಲಿ ಪಂಜಾಬ್ ಮತ್ತು ರಾಜಸ್ಥಾನ ಸರ್ಕಾರಗಳು ಅತ್ಯಾಚಾರದ ಘಟನೆಗಳನ್ನು ನಿರಾಕರಿಸಿಲ್ಲ, ಮಾತ್ರವಲ್ಲ ಸಂತ್ರಸ್ತ ಕುಟುಂಬಕ್ಕೆ ತಡೆ ಒಡ್ಡಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರು ಕಾಂಗ್ರೆಸ್ ಆಡಳಿತ ನಡೆಸುತ್ತಿರುವ ಪಂಜಾಬ್‌ನಲ್ಲಿ 6 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿದ್ದು, ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಮೌನವಹಿಸಿದ್ದಾರೆ ಎಂದು ಆರೋಪ ಮಾಡಿದ್ದರು.

ಈ ಆರೋಪಕ್ಕೆ ತಿರುಗೇಟು ನೀಡಿರುವ ರಾಹುಲ್ ಗಾಂಧಿ, ಉತ್ತರ ಪ್ರದೇಶ ಸರ್ಕಾರದ ಮಾದರಿಯಲ್ಲಿ ಪಂಜಾಬ್ ಮತ್ತು ರಾಜಸ್ತಾನ ಸರ್ಕಾರಗಳು ಘಟನೆಯನ್ನು ನಿರಾಕರಿಸಿಲ್ಲ. ಆರೋಪಿಯನ್ನು ಬಂಧಿಸಿ ಕಾನೂನು ಕ್ರಮಕೈಗೊಂಡಿದೆ. ಆದರೆ ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಘಟನೆ ನಡೆದಾಗ ಯೋಗಿ ಸರ್ಕಾರ ಅತ್ಯಾಚಾರವೇ ನಡೆದಿಲ್ಲ ಎಂದು ಹೇಳಿತ್ತು. ಮಾತ್ರವಲ್ಲ ಸಂತ್ರಸ್ತ ಕುಟುಂಬಕ್ಕೆ ಮಾಧ್ಯಮದವರನ್ನು ಭೇಟಿಯಾಗಲು ತಡೆ ಒಡ್ಡಿತ್ತು ಎಂದು ಹೇಳಿದ್ದಾರೆ.

ಒಂದು ವೇಳೆ ಪಂಜಾಬ್ ನಲ್ಲಿಯೂ ಇದೇ ರೀತಿ ಆಗಿದ್ದರೆ ನಾನು ಅಲ್ಲಿಗೆ ಹೋಗಿ ನ್ಯಾಯಕ್ಕಾಗಿ ಹೋರಾಡುತ್ತಿದ್ದೆ ಎಂದು ರಾಹುಲ್ ತಿರುಗೇಟು ನೀಡಿದ್ದಾರೆ. ಪಂಜಾಬ್ ಘಟನೆಯನ್ನು ಮುಂದಿಟ್ಟು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group