ರಾಷ್ಟ್ರೀಯ ಸುದ್ದಿ

“ಪಾಕ್, ಚೀನಾ ಜೊತೆ ಯುದ್ಧದ ದಿನಾಂಕ ನಿಗದಿ ಮಾಡಿರುವ ಮೋದಿ”: ಬಿಜೆಪಿ ನಾಯಕನ ವಿವಾದಾತ್ಮಕ ಹೇಳಿಕೆ

ವರದಿಗಾರ (ಅ.25): ಪಾಕಿಸ್ತಾನ ಮತ್ತು ಚೀನಾ ಜೊತೆ ಭಾರತ ಯಾವಾಗ ಯುದ್ಧ ಮಾಡಬೇಕು ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ನಿರ್ಧರಿಸಿ ದಿನಾಂಕವನ್ನು ಫಿಕ್ಸ್ ಮಾಡಿದ್ದಾರೆ ಎಂದು ಬಿಜೆಪಿಯ ಉತ್ತರ ಪ್ರದೇಶದ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾರತ ಮತ್ತು ಚೀನಾ ನಡುವಿನ ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ಉದ್ವಿಗ್ನತೆಯ ಸೃಷ್ಟಿಯಾಗಿರುವ ನಡುವೆಯೇ ಶುಕ್ರವಾರ ಅವರ ಈ ಹೇಳಿಕೆ ಹೊರಬಿದ್ದಿದೆ. ರಾಮ ಮಂದಿರ ಮತ್ತು ಸಂವಿಧಾನದ 370 ನೇ ವಿಧಿಯ ರದ್ದತಿ ನಿರ್ಧಾರಗಳಂತೆ, ಪಾಕಿಸ್ತಾನ ಮತ್ತು ಚೀನಾದೊಂದಿಗೆ ಯಾವಾಗ ಯುದ್ಧ ನಡೆಯಲಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಅಪ್ ಲೋಡ್ ಮಾಡಿರುವ ವೀಡಿಯೊದಲ್ಲಿ ಹೇಳಿದ್ದಾರೆ.

“ಈ ಸಂಬಂಧ ದಿನಾಂಕವನ್ನು ನಿರ್ಧರಿಸಲಾಗಿದೆ” ಎಂದು ಅವರು ಹಿಂದಿಯಲ್ಲಿ ಹೇಳಿದ್ದಾರೆ. ಬಿಜೆಪಿ ಶಾಸಕ ಸಂಜಯ್ ಯಾದವ್ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಂಗ್ ಈ ಹೇಳಿಕೆ ನೀಡಿದ್ದಾರೆ. ಸಂಜಯ್ ಅವರು ಈ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ.
ಸಿಂಗ್ ತಮ್ಮ ಭಾಷಣದಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಕಾರ್ಯಕರ್ತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group