ರಾಷ್ಟ್ರೀಯ ಸುದ್ದಿ

ಭೀಮ್ ಆರ್ಮಿಯ ಚಂದ್ರಶೇಖರ್ ಆಜಾದ್ ಬೆಂಗಾವಲು ಮೇಲೆ ಗುಂಡಿನ ದಾಳಿ

ವರದಿಗಾರ (ಅ.26) ತಮ್ಮ ಬೆಂಗಾವಲು ಪಡೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಭೀಮ್ ಆರ್ಮಿ ಮುಖ್ಯಸ್ಥ, ಆಜಾದ್ ಸಮಾಜ ಪಕ್ಷದ ನಾಯಕ ಚಂದ್ರಶೇಖರ್ ಆಜಾದ್ ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಬುಲಂದ್‌ಶಹರ್ ನಲ್ಲಿ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ. ಈ ಸಂಬಂಧ ಅವರು ಟ್ವಿಟ್ ಮಾಡಿದ್ದಾರೆ. “ಬುಲಂದ್‌ಶಹರ್‌ ಉಪ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದರಿಂದ ಪ್ರತಿ ಸ್ಪರ್ಧಿ ಪಕ್ಷಗಳು ಭಯ ಭೀತಿಗೊಳಗಾಗಿವೆ. ಬುಲಂದ್ ಶಹರ್ ಚುನಾವಣೆ ಪ್ರಚಾರ ಸಭೆ ಪ್ರತಿಸ್ಪರ್ಧಿಗಳಿಗೆ ನಿದ್ರೆ ಇಲ್ಲದಂತೆ ಮಾಡಿದೆ. ಹಾಗಾಗಿ ತಮ್ಮ ಬೆಂಗಾವಲಿನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಘಟನೆ ಪ್ರತಿಸ್ಪರ್ಧಿಗಳಲ್ಲಿರುವ ಚುನಾವಣೆಯಲ್ಲಿ ಸೋಲುವ ನಿರಾಸೆಯನ್ನು ಸೂಚಿಸುತ್ತಿದೆ. ಚುನಾವಣೆಯಲ್ಲಿ ಸೋಲುವ ಭಯದಿಂದ ಬುಲಂದ್ ಶಹರ್ ನಲ್ಲಿ ವಾತಾವರಣ ಹಾಳುಗೆಡವಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಚಂದ್ರ ಶೇಖರ್ ಆಜಾದ್ ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group