ರಾಷ್ಟ್ರೀಯ ಸುದ್ದಿ

ಏಕರೂಪ ನಾಗರಿಕ ಸಂಹಿತೆ ಬಗ್ಗೆ ಸಾರ್ವಜನಿಕ ಚರ್ಚೆ ನಡೆಯಲಿ: ಆರ್ ಎಸ್ ಎಸ್

ವರದಿಗಾರ (ಅ.26) ಏಕರೂಪದ ನಾಗರಿಕ ಸಂಹಿತೆ ಕುರಿತು ಸಾರ್ವಜನಿಕ ಚರ್ಚೆ ನಡೆಯಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜಂಟಿ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಭಾನುವಾರ ಹೇಳಿದ್ದಾರೆ.

ಆದರೆ ಈ ಸಂಬಂಧ ಮಸೂದೆ ಮಂಡಿಸಲು ಇದು ಸೂಕ್ತ ಸಮಯವೇ ಅಥವಾ ಅಲ್ಲವೇ ಎಂಬುದನ್ನು ಕೇಂದ್ರ ಸರ್ಕಾರವೇ ನಿರ್ಧರಿಸಬೇಕು ಎಂದು ಅವರು ಹೇಳಿದ್ದಾರೆ.

ಆರ್‌ಎಸ್‌ಎಸ್‌ನ ಸಂಸ್ಥಾಪನ ದಿನದಂದು ಥಿಂಕ್-ಟ್ಯಾಂಕ್ ಇಂಡಿಯಾ ಫೌಂಡೇಶನ್ ಆಯೋಜಿಸಿದ್ದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಹೊಸಬಾಳೆ, ಸಂವಿಧಾನದ ನಿರ್ದೇಶನ ತತ್ವಗಳಗಳಲ್ಲಿ ಏಕರೂಪದ ನಾಗರಿಕ ಸಂಹಿತೆಯನ್ನು ಉಲ್ಲೇಖಿಸಲಾಗಿದೆ. ಆದರೆ ಸಂವಿಧಾನದ ನಿರ್ಮಾತೃಗಳು ಅದನ್ನು ಕಾರ್ಯಗತಗೊಳಿಸಲು ಯಾವುದೇ ಸಮಯದ ಚೌಕಟ್ಟನ್ನು ಶಿಫಾರಸು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸಂಬಂಧ ಮಸೂದೆ ಜಾರಿಗೊಳಿಸಲು ಇದು ಒಳ್ಳೆಯ ಸಮಯವೇ ಅಥವಾ ಅಲ್ಲವೇ ಎಂಬುದನ್ನು ಸರ್ಕಾರ ನಿರ್ಧರಿಸಬೇಕು ಎಂದು ಹೊಸಬಾಳೆ ಹೇಳಿದರು. ನಾವು ಮೊದಲು ಇದರ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಊಹಾಪೋಹಗಳನ್ನು ಇಲ್ಲವಾಗಿಸಲು ಈ ಬಗ್ಗೆ ಸರಿಯಾದ ಸಾರ್ವಜನಿಕ ಚರ್ಚೆ ನಡೆಯಬೇಕು. ಸಂವಿಧಾನದ 370 ಅಥವಾ ಸಂವಿಧಾನದ 35 ಎ ವಿಧಿ ಏನು ಎಂದು ಜನರಿಗೆ ತಿಳಿದಿರಲಿಲ್ಲ. ಜನರಿಗೆ ಶಿಕ್ಷಣ ನೀಡುವುದು ಮುಖ್ಯ ಎಂದು ಹೇಳಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group