ರಾಷ್ಟ್ರೀಯ ಸುದ್ದಿ

ಪ್ರತಿಭಟನೆಗೆ ಮುಂದಾಗಿದ್ದ ನಟಿ ಖುಷ್ಬು ಬಂಧನ

ವರದಿಗಾರ (ಅ.27) ಮನುಸ್ಮೃತಿಯನ್ನು ಉಲ್ಲೇಖಿಸಿ ಮಹಿಳೆಯರ ವಿರುದ್ಧ ಹೇಳಿಕೆ ನೀಡಿದ ವಿಸಿಕೆ ಅಧ್ಯಕ್ಷ ಥೋಲ್ ತಿರುಮಾವಲನ್ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಲು ಚಿದಂಬರಂಗೆ ತೆರಳುತ್ತಿದ್ದ ಇತ್ತೀಚೆಗಷ್ಟೇ ಬಿಜೆಪಿ ಸೇರಿರುವ ನಟಿ ಖುಷ್ಬು ಅವರನ್ನು ತಮಿಳುನಾಡಿನ ಚೆಂಗಲಪಟ್ಟು ಪೊಲೀಸರು ಇಂದು ಬಂಧಿಸಿದ್ದಾರೆ. ಅವರೊಂದಿಗೆ ತೆರಳುತ್ತಿದ್ದ ಇತರ ಬಿಜೆಪಿ ಕಾರ್ಯಕರ್ತರನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ಚಿದಂಬರಂನಲ್ಲಿ ನಿನ್ನೆ ನಡೆದ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಖುಷ್ಬು ಬಂಧನದ ನಂತರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಘವನ್ ಅವರನ್ನು ಮೇಲ್ಮರುವತ್ತೂರು ಬಳಿಯ ಅಥರ್ ಟೋಲ್ ಗೇಟ್ ಬಳಿ ಬಂಧಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಇಬ್ಬರನ್ನೂ ಬಂಧಿಸಲಾಗಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಕೊರೊನಾ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ. ವೈರಸ್ ಹರಡುವುದನ್ನು ತಡೆಯುವ ಉದ್ದೇಶದಿಂದ ಚಿದಂಬರಂನಲ್ಲಿ ಹೆಚ್ಚಿನ ಜನಸಂದಣಿ ಸೇರದಂತೆ ತಡೆಯಲು ಈ ಕ್ರಮ ಅನಿವಾರ್ಯವಾಗಿದೆ. ಬಂಧಿತ ಬಿಜೆಪಿ ಕಾರ್ಯಕರ್ತರನ್ನು ಸಂಜೆಯ ಮೊದಲು ಬಿಡುಗಡೆ ಮಾಡಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮ್ಮನ್ನು ಬಂಧಿಸಲಾಗಿದೆ… ಪೊಲೀಸ್ ವ್ಯಾನ್ ನಲ್ಲಿ ಕರೆದೊಯ್ಯಲಾಗಿದೆ. ಮಹಿಳೆಯರ ಘನತೆಗಾಗಿ ನಾವು ನಮ್ಮ ಕೊನೆಯ ಉಸಿರು ಇರುವವರೆಗೂ ಹೋರಾಡುತ್ತೇವೆ. ಪ್ರಧಾನಿ ಮೋದಿ ಯಾವಾಗಲೂ ಮಹಿಳೆಯರ ಸುರಕ್ಷತೆಯ ಬಗ್ಗೆ ಮಾತನಾಡುತ್ತಾರೆ ಮತ್ತು ನಾವು ಅವರ ಹಾದಿಯಲ್ಲೇ ನಡೆಯುತ್ತೇವೆ ಇಲ್ಲಿನ ಕೆಲವರ ದೌರ್ಜನ್ಯಕ್ಕೆ ನಾವು ಎಂದಿಗೂ ತಲೆಬಾಗುವುದಿಲ್ಲ. ಭಾರತ್ ಮಾತಾ ಕಿ ಜೈ! ಎಂದು ಖುಷ್ಬು ಟ್ವೀಟ್ ಮಾಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group