ರಾಷ್ಟ್ರೀಯ ಸುದ್ದಿ

ಹತ್ರಾಸ್ ಪ್ರಕರಣದ ತನಿಖೆಯ ಮೇಲೆ ಅಲಹಾಬಾದ್ ಹೈಕೋರ್ಟ್ ನಿಂದ ಮೇಲ್ವಿಚಾರಣೆ; ಸುಪ್ರೀಂ ಮಹತ್ವದ ತೀರ್ಪು

ವರದಿಗಾರ (ಅ.31) ಇಡೀ ದೇಶದಲ್ಲಿ ಆಕ್ರೋಶ ಭುಗಿದೇಳಲು ಕಾರಣವಾಗಿದ್ದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ನಡೆಯುತ್ತಿರುವ ತನಿಖೆಯ ಮೇಲೆ ನಿಗಾ ಇಡುವಂತೆ ಅಲಹಾಬಾದ್ ಹೈಕೋರ್ಟ್ ಗೆ ಮಂಗಳವಾರ ಸುಪ್ರೀಂಕೋರ್ಟ್ ಸೂಚಿಸಿದೆ.

ಸೆಪ್ಟಂಬರ್ 29ರಂದು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 19 ವರ್ಷದ ದಲಿತ ಯುವತಿಯ ಪ್ರಕರಣದ ತನಿಖೆಯ ಮೇಲೆ ನ್ಯಾಯಾಂಗ ಮೇಲ್ವಿಚಾರಣೆ ವಹಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಸತ್ಯಮಾ ದುಬೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಈ ಆದೇಶ ನೀಡಿದೆ.

ತನಿಖೆಯ ಎಲ್ಲಾ ಅಂಶಗಳನ್ನು ಅಲಹಾಬಾದ್ ಹೈಕೋರ್ಟ್ ಪರಿಶೀಲಿಸಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಪ್ರಸ್ತುತ, ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದ್ದು, ಅದು ತನ್ನ ತನಿಖೆಯ ಸ್ಥಿತಿಗತಿ ವರದಿಯನ್ನು ಹೈಕೋರ್ಟ್ ಗೆ ಸಲ್ಲಿಸಬೇಕು ಎಂದು ಸುಪ್ರೀಂ ಹೇಳಿದೆ.

ಮುಖ್ಯನ್ಯಾಯಮೂರ್ತಿ ಎಸ್‌.ಎ. ಬೋಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಹೈಕೋರ್ಟ್ ಪ್ರಕರಣವನ್ನು ಮೇಲ್ವಿಚಾರಣೆ ಮಾಡುವುದು ಸೂಕ್ತವೆಂದು ಅಭಿಪ್ರಾಯಪಟ್ಟಿದೆ, ಸಂತ್ರಸ್ತ ಯುವತಿಯ ಅಂತ್ಯಸಂಸ್ಕಾರವನ್ನು ತರಾತುರಿಯಲ್ಲಿ ಪೊಲೀಸರೇ ನೆರವೇರಿಸಿದ ಕುರಿತು ದಾಖಲಿಸಿರುವ ಸ್ವಯಂ ಪ್ರೇರಿತ ದೂರಿನ ಬಗ್ಗೆ ನ್ಯಾಯಾಲಯವು ಈಗಾಗಲೇ ಪರಿಶೀಲಿಸುತ್ತಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group