ರಾಜ್ಯ ಸುದ್ದಿ

ಕಾಂಗ್ರೆಸ್ ಅಭ್ಯರ್ಥಿ ಮುದಿ ಎತ್ತು ಎಂದ ಬಿಜೆಪಿ; ಯಡಿಯೂರಪ್ಪ ಅವರ ವಯಸ್ಸನ್ನು ಗೌರವಿಸುತ್ತೇವೆ ಎಂದ ಡಿಕೆಶಿ

ವರದಿಗಾರ (ಅ.31) ಬಿಜೆಪಿ ನಾಯಕರು ನಮ್ಮ ಅಭ್ಯರ್ಥಿಯನ್ನು ಮುದಿ ಎತ್ತು ಎಂದು ಕರೆಯಲಿ, ನಾವು ಮಾತ್ರ ಮುಖ್ಯಮಂತ್ರಿಗಳನ್ನು ಆ ರೀತಿ ಕರೆಯುವುದಿಲ್ಲ.ಮುಖ್ಯಮಂತ್ರಿಗಳನ್ನು ಅವರ ವಯಸ್ಸನ್ನು ನಾವು ಗೌರವಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಟೀಕೆಗೆ ಸಂಬಂಧಿಸಿದಂತೆ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ಜಯಚಂದ್ರ ಅವರನ್ನು ಬಿಜೆಪಿಯವರು ಮುದಿ ಎತ್ತು ಎಂದು ಕರೆದರೆ ನಮ್ಮ ರಾಜ್ಯದ ಮುಖ್ಯಮಂತ್ರಿಗಳನ್ನು ನಾವು ಏನಂತಾ ಕರೆಯಬೇಕು? ಯಡಿಯೂರಪ್ಪನವರ ವಯಸ್ಸಿನ ಬಗ್ಗೆ ನಾವು ಮಾತನಾಡುವುದಿಲ್ಲ. ನಮ್ಮ ತಂದೆಗೆ ವಯಸ್ಸಾದಂತೆ ಅವರಿಗೂ ವಯಸ್ಸಾಗಿದೆ. ಜಯಚಂದ್ರ ಅವರಿಗೆ 71 ವರ್ಷ, ಮೊನ್ನೆ ಬಿಜೆಪಿ ಮಂತ್ರಿಗಳನ್ನು ಇದೇ ಜಯಚಂದ್ರ ಅವರ ಬಳಿ ತರಬೇತಿ ತೆಗೆದುಕೊಂಡು ಬನ್ನಿ ಅಂತಾ ಹೇಳಿ ಕಳುಹಿಸಿದ್ದರು. ಜಯಚಂದ್ರ ಅವರು ಕಂದಾಯ ಸಚಿವರಿಗೆ 2 ಗಂಟೆ ಪಾಠ ಮಾಡಿ ಕಳುಹಿಸಿದ್ದಾರೆ. ಜಯಚಂದ್ರ ಅವರಿಗೆ ಅಷ್ಟು ಅನುಭವವಿದೆ. ಜಯಚಂದ್ರ ಅವರನ್ನು ಮುದಿ ಎತ್ತು, ತಮ್ಮ ಅಭ್ಯರ್ಥಿ ದುಡಿಯುವ ಎತ್ತು ಎಂದು ಹೇಳುತ್ತಾರೆ. ಅವರ ಅಭ್ಯರ್ಥಿ ಏನು ದುಡಿಮೆ ಮಾಡಿದ್ದಾರೆ. ಬಿಜೆಪಿಯವರು ಬೇಕಾದರೆ ನಮ್ಮ ಅಭ್ಯರ್ಥಿಯನ್ನು ಮುದಿ ಎತ್ತು ಎಂದು ಕರೆದುಕೊಳ್ಳಲಿ ಆದರೆ ನಾವು ಮಾತ್ರ ಮುಖ್ಯಮಂತ್ರಿಗಳನ್ನು ಆ ರೀತಿ ಕರೆಯುವುದಿಲ್ಲ ಎಂದು ತಿರುಗೇಟು ನೀಡಿದರು.

ನಾವು ಇರೋ ವಿಚಾರ ಹೇಳಿದರೆ ಬಿಜೆಪಿ ಕಾರ್ಯಕರ್ತರು ಅಡ್ಡ ಹಾಕಿ,ಹೋಗಬೇಡ ಅಂತಿದ್ದಾರೆ.ಇದು ಯಾವ ದೇಶ? ಇದಕ್ಕೆಲ್ಲ ನಾವು ಬಗ್ಗುವುದಿಲ್ಲ.ನಿನ್ನೆ ಪ್ರಚಾರಕ್ಕೆ ಅಡ್ಡಿ ಪಡಿಸಿದವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಿಲ್ಲ ಎಂದರೆ,ಯಾವುದೇ ಬಿಜೆಪಿ ನಾಯಕರ ಭಾಷಣಗಳನ್ನು ಮಾಡಲು ನಮ್ಮ ಕಾರ್ಯಕರ್ತರು ಬಿ ಡುವುದಿಲ್ಲ ಎಂದು ನಮ್ಮ ನಾಯಕರು ತೀರ್ಮಾನಿಸಿದ್ದಾರೆ.ಇದನ್ನು ಚುನಾವಣಾ ಆಯೋಗ ಹಾಗೂ ಪೊಲೀಸ್ ಆಯುಕ್ತರು ಗಮನದಲ್ಲಿಟ್ಟುಕೊಳ್ಳಬೇಕು.ಎಸಿಪಿಯೊಬ್ಬರು ಮಾಜಿ ಮುಖ್ಯ ಮಂತ್ರಿಗಳಿಗೆ ಹಿಂದಿನ ಗೇಟ್ ನಿಂದ ಹೋಗಲು ಹೇಳುತ್ತಾನೆ ಎಂದರೆ ಎಂತಹ ರಾಜಕಾರಣ ನಡೆಯುತ್ತಿದೆ.ಅವರಿಗೆ ರಕ್ಷಣೆ ಕೊಡದ ಆ ಪೊಲೀಸ್ ಅಧಿ ಕಾರಿಯನ್ನು ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group