ರಾಷ್ಟ್ರೀಯ ಸುದ್ದಿ

ಎಸ್ ಪಿ ಅಭ್ಯರ್ಥಿಗಳನ್ನು ಸೋಲಿಸಲು ಬಿಜೆಪಿಗಾದರೂ ಮತ ಹಾಕಲಾಗುವುದು; ಮಾಯಾವತಿ: ಬಿಎಸ್ ಪಿ ವರಿಷ್ಠೆಯ ಹೇಳಿಕೆಗೆ ಪ್ರಿಯಾಂಕಾ ಗರಂ

Priyanka Gandhi

ವರದಿಗಾರ (ಅ.31) ಸಮಾಜವಾದಿ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ಬಿಜೆಪಿಗಾದರೂ ಮತ ನೀಡುವುದಾಗಿ ಬಿಎಸ್ ಪಿ ವರಿಷ್ಠೆ, ಮಾಜಿ ಮುಖ್ಯಮಂತ್ರಿ ಮಾಯಾವತಿ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಹೇಳಲು ಇನ್ನೇನಾದರೂ ಉಳಿದಿದೆಯೇ ? ಎಂದು ಗರಂ ಆಗಿ ಪ್ರಶ್ನಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಆರು ಬಿಎಸ್ ಪಿ ಶಾಸಕರು ಪಕ್ಷ ಬದಲಾಯಿಸಿ, ಸಮಾಜವಾದಿ ಪಕ್ಷಕ್ಕೆ ಸೇರಲು ಪ್ರಯತ್ನಿಸುತ್ತಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಮಾಯಾವತಿ ಹೇಳಿಕೆ ನೀಡಿದ್ದು, ಸಮಾಜವಾದಿ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ತಮ್ಮ ಪಕ್ಷ ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ. ಬಿಜೆಪಿ ಅಥವಾ ಮತ್ತೊಂದು ಪಕ್ಷದ ಅಭ್ಯರ್ಥಿಗಳಿಗೆ ಮತ ಚಲಾಯಿಸಲು ತಾವು ಹಿಂಜರಿಯುವುದಿಲ್ಲ ಎಂದು ಹೇಳಿದ್ದರು. ಸಮಾಜವಾದಿ ಪಕ್ಷದ ಅಭ್ಯರ್ಥಿಯ ಹಿಂದೆ ಎರಡನೇ ಸ್ಥಾನದಲ್ಲಿರುವವರಿಗೆ ಬಿಎಸ್ಪಿ ಶಾಸಕರ ಬೆಂಬಲ ಇರುತ್ತದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್‌ನಲ್ಲಿ, ಇದರ ನಂತರವೂ ಹೇಳಲು ಏನಾದರೂ ಉಳಿದಿದೆಯೇ ? ಎಂದು ಪ್ರಶ್ನಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group