ರಾಷ್ಟ್ರೀಯ ಸುದ್ದಿ

ರಾಜಕೀಯ ಪ್ರವೇಶ ಕೈಬಿಟ್ಟ ರಜನಿಕಾಂತ್

ವರದಿಗಾರ (ಅ.31) ಅನಾರೋಗ್ಯದ ಕಾರಣದಿಂದ ರಾಜಕೀಯ ಪ್ರವೇಶಿಸುವುದಿಲ್ಲ ಎಂದು ಖ್ಯಾತ ತಮಿಳು ನಟ ಸೂಪರ್‌ಸ್ಟಾರ್‌ ರಜನಿಕಾಂತ್‌  ಪ್ರಕಟಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ವೈದ್ಯರು ನೀಡಿರುವ ಸಲಹೆ ಅನುಸಾರ, ತಾವು ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಪಟ್ಟ ನಂತರದ ತಮ್ಮ ಆರೋಗ್ಯ ಸ್ಥಿತಿ ಮತ್ತು ಕೋವಿಡ್‌ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸದ್ಯ ರಾಜಕೀಯಕ್ಕೆ ಸೇರುವ ನಿರ್ಧಾರ ಕೈಬಿಟ್ಟಿರುವುದಾಗಿ ತಿಳಿಸಿದ್ದಾರೆ.

2018ರ ಹೊಸ ವರ್ಷದ ಸಂಜೆ ತಾವು ರಾಜಕೀಯ ಪ್ರವೇಶಿಸುವುದಾಗಿ ನೀಡಿದ್ದ ಹೇಳಿಕೆಯಿಂದ ಹಿಂದೆ ಸರಿಯುವುದಾಗಿ ಬರೆದಿದ್ದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group