ರಾಷ್ಟ್ರೀಯ ಸುದ್ದಿ

ಕೋಡಿಯೇರಿ ಬಾಲಕೃಷ್ಣನ್ ಪುತ್ರ ಇಡಿ ವಶಕ್ಕೆ

ವರದಿಗಾರ (ಅ.31) ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಾಜಿ ಗೃಹ ಸಚಿವ ಕೋಡಿಯೇರಿ ಬಾಲಕೃಷ್ಣನ್ ಪುತ್ರ ಬಿನೇಶ್ ಕೋಡಿಯೇರಿಯನ್ನು ಬೆಂಗಳೂರು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕಾಟನ್ ಪೇಟೆಯಲ್ಲಿ ದಾಖಲಾದ ಮಾದಕ ಜಾಲ ಪ್ರಕರಣದ ಪ್ರಮುಖ ಆರೋಪಿ ಅನೂಪ್ ನೊಂದಿಗೆ ಬೀನೇಶ್ ನಂಟು ಹೊಂದಿದ್ದು, ಕಮ್ಮನಹಳ್ಳಿಯಲ್ಲಿ ರೆಸ್ಟೋರೆಂಟ್ ಒಂದನ್ನು ತೆರೆಯಲು ಬಿನೀಶ್ ಡ್ರಗ್ಸ್ ಪೆಡ್ಲರ್ ಅನೂಪ್ಗೆ 50 ಲಕ್ಷ ರೂ ಹಣಕಾಸಿನ ನೆರವು ನೀಡಿದ್ದರು ಎನ್ನಲಾಗಿದೆ.

ಈ ಮಾಹಿತಿ ಆಧರಿಸಿ ಬೆಂಗಳೂರು ಇ ಡಿ ನೋಟಿಸ್ ನೀಡಿತ್ತು. ಹೀಗಾಗಿ ಅ. 6 ರಂದು ವಿಚಾರಣೆಗೆ ಹಾಜರಾಗಿ 6 ಗಂಟೆಗಳ ಕಾಲ ಬೀನೇಶ್ ವಿಚಾರಣೆ ಎದುರಿಸಿದ್ದು, ಈ ವೇಳೆ ಅನೂಪ್ಗೆ ಸ್ನೇಹಿತನ ಮೂಲಕ ಹಣ ಕೊಡಿಸಿದ್ದಾಗಿ ತನಿಖಾಧಿಕಾರಿಗಳಿಗೆ ತಿಳಿಸಿದ್ದರು.

ನಂತರ ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ ಇ.ಡಿ ಅಧಿಕಾರಿಗಳು ಬೀನೇಶ್ ಅವರಿಗೆ ಸೂಚಿಸಿದ್ದರು. ಬಿನೇಶ್ ಇಂದು ಮತ್ತೆ ಬೆಂಗಳೂರಿನ ಶಾಂತಿನಗರದ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದರು. ಸೂಕ್ತ ದಾಖಲೆ ನೀಡದ ಹಿನ್ನೆಲೆಯಲ್ಲಿ ಬಿನೇಶ್ ಅವರನ್ನು ಇಡಿ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group