ರಾಜ್ಯ ಸುದ್ದಿ

ಕಾಂಗ್ರೆಸ್ ಶಾಸಕರಿಗೆ ಬೇಕಾಗಿದ್ದು ತಮ್ಮ ಸ್ವಂತ ಲಾಭವೇ ಹೊರತು ಜನರ ಕಲ್ಯಾಣವಲ್ಲ ; ಕುಮಾರಸ್ವಾಮಿ

HD Kumaraswamy

ವರದಿಗಾರ (ಅ.31) ಕಾಂಗ್ರೆಸ್ ಶಾಸಕರಿಗೆ ಬೇಕಾಗಿದ್ದು ತಮ್ಮ ಸ್ವಂತ ಲಾಭವೇ ಹೊರತು ಜನರ ಕಲ್ಯಾಣವಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ರಾಜರಾಜೇಶ್ವರಿ ನಗರ ವ್ಯಾಪ್ತಿಯ ಲಕ್ಷ್ಮೀದೇವಿ ವಾರ್ಡ್‌ನಲ್ಲಿ ಜೆಡಿಎಸ್‌ ಅಭ್ಯರ್ಥಿ ವಿ. ಕೃಷ್ಣಮೂರ್ತಿ ಪರ ಪ್ರಚಾರ ನಡೆಸಿ ಮಾತನಾಡಿದ ಅವರು, ಮೈತ್ರಿ ಸರ್ಕಾರದಲ್ಲಿ ಇದ್ದಷ್ಟು ದಿನ ಕಷ್ಟಪಟ್ಟು ಕೆಲಸ ಮಾಡಿದ್ದೇನೆ. ಕಚೇರಿಗೆ ತಡವಾಗಿ ಹೋಗಿದ್ದಕ್ಕೆ ಕಾಂಗ್ರೆಸ್‌ ಶಾಸಕರೊಬ್ಬರು ಮುನಿಸಿ ಕೊಂಡಿದ್ದರು. ಕೃಷ್ಣಾದಲ್ಲಿ ಜನರ ಸಮಸ್ಯೆ ಆಲಿಸಿ, ನನ್ನ ಕಚೇರಿಗೆ ಹೋಗಿದ್ದೆ. ಆಗ ನನ್ನ ಕಚೇರಿಗೆ ಬಂದ ಕಾಂಗ್ರೆಸ್‌ ಶಾಸಕರೊಬ್ಬರು ನಿಮಗೆ ಎಷ್ಟು ಹೊತ್ತು ಕಾಯೋದು ಎಂದು ಅವರು ತಂದಿದ್ದ 10-12 ಪತ್ರಗಳನ್ನು ಇಸ್ಪೀಟ್ ಎಲೆಯಂತೆ ಬಿಸಾಡಿದ್ದರು. ಇಂತಹ ಹಲವಾರು ಕಿರುಕುಳ ಅವಮಾನ ಅಪಮಾನಗಳನ್ನೆಲ್ಲ ಸಹಿಸಿ ಕೆಲಸ ಮಾಡಿದ್ದೇನೆ. ಕಾಂಗ್ರೆಸ್ಸಿಗರು ನೀಡಿದ ಕಿರುಕುಳದ ನಡುವೆಯೂ ರೈತರ ಹಿತ ಕಾಯಲು 25 ಸಾವಿರ ಕೋಟಿ ರೂ. ಸಾಲಮನ್ನಾ ಮಾಡಿದೆ. ಒಬ್ಬ ಮುಖ್ಯಮಂತ್ರಿ ಸಾರ್ವಜನಿಕವಾಗಿ ಕಣ್ಣೀರು ಹಾಕಿದ್ದರೆ ಅದು ನಾನು ಮಾತ್ರ. ಅಂತಹ ಸ್ಥಿತಿಯಲ್ಲಿ ಕಾಂಗ್ರೆಸ್‌ನವರು ನನ್ನನ್ನು ಇಟ್ಟಿದ್ದರು ಎಂದು ಕುಮಾರಸ್ವಾಮಿ ಹೇಳಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group