ರಾಜ್ಯ ಸುದ್ದಿ

ಬಿಜೆಪಿ ಅಧಿಕಾರದಲ್ಲಿದೆ ಎಂದು ಮುನಿರತ್ನ ಪರ ಕೆಲಸ ಮಾಡಿದರೆ ಮುಂದೆ ಕಷ್ಟದ ದಿನಗಳು ಕಾದಿವೆ: ಪೊಲೀಸರಿಗೆ ಸಿದ್ದರಾಮಯ್ಯ ಎಚ್ಚರಿಕೆ

ವರದಿಗಾರ (ಅ.31) ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ ಎಂದು ಮುನಿರತ್ನ ಪರ ಕೆಲಸ ಮಾಡಿದರೆ ಮುಂದೆ ನಿಮಗೆ ಕಷ್ಟದ ದಿನಗಳು ಕಾದಿವೆ ಎಂದು ಪೊಲೀಸರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರದ ಜಾಲಹಳ್ಳಿ, ಪೀಣ್ಯ ಮತ್ತಿತರ ವಾರ್ಡ್ ನಲ್ಲಿ ಇಂದು ರೋಡ್‌ ಶೋ ನಡೆಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಅವರ ಪರ ಮತ ಯಾಚನೆ ಮಾಡಿ ಮಾತನಾಡಿದ ಅವರು, ಪೊಲೀಸರು ಒಂದು ಪಕ್ಷದ ಪರ ಕೆಲಸ ಮಾಡಿದರೆ ಸಹಿಸುವುದಿಲ್ಲ ಎಂದರು.

ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತದೆ. ಮುನಿರತ್ನ ಅವರು ಎರಡು ಬಾರಿ ಗೆದ್ದು ಶಾಸಕನಾಗಲು ಕಾರಣ ಕಾಂಗ್ರೆಸ್ ಪಕ್ಷವೇ ಹೊರತು ಅವರ ವೈಯಕ್ತಿಕ ವರ್ಚಸ್ಸಲ್ಲ ಎಂದು ಹೇಳಿದರು.

ತಾನು ಮುಖ್ಯಮಂತ್ರಿಯಾಗಿದ್ದಾಗ ಆರ್.ಆರ್ ನಗರ ಕ್ಷೇತ್ರದ ಅಭಿವೃದ್ಧಿಗೆ ರೂ.2,000 ಕೋಟಿ ಅನುದಾನ ನೀಡಿದ್ದೆ, ಆದರೂ ನಮಗೆ ಮುನಿರತ್ನ ದ್ರೋಹ ಬಗೆದರು ಎಂದು ಹೇಳಿದರು.

ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷವನ್ನು ನನ್ನ ತಾಯಿ ಅಂತ ಹೇಳುತ್ತಿದ್ದ ಮುನಿರತ್ನ ಅದೇ ತಾಯಿಗೆ ದ್ರೋಹ ಬಗೆದು ಬಿಜೆಪಿ ಸೇರಿದರು. ನಾವು ಯಾಕಪ್ಪಾ ಪಕ್ಷನ ತಾಯಿ ಅಂತ ಕರೀತಿದ್ದಿ, ಈಗ ಅದೇ ತಾಯಿಗೆ ಮೋಸ ಮಾಡಿದ್ಯಲ ಎಂದು ಕೇಳಿದರೆ ಕಾಂಗ್ರೆಸ್ ನಾಯಕರು ನನ್ನ ತಾಯಿಗೆ ಅವಮಾನ ಮಾಡ್ತಿದಾರೆಂದು ಗೊಳೋ ಅಂತ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ಎಂಬ ಕಾರಣಕ್ಕೆ ಕ್ಷೇತ್ರದ ಜನತೆ ಮುನಿರತ್ನ ಅವರನ್ನು ಎರಡು ಬಾರಿ ಆಯ್ಕೆ ಮಾಡಿದರೇ ಹೊರತು ಅವರು ದೊಡ್ಡ ನಾಯಕರು‌ ಎಂದಲ್ಲ. ನಾವೇನೂ ಅವರ ಕುತ್ತಿಗೆ ಹಿಡಿದು‌ ಪಕ್ಷದಿಂದ ಹೊರ ದಬ್ಬಲಿಲ್ಲ. ಸ್ವಾರ್ಥಕ್ಕಾಗಿ ಅವರು ಬಿಜೆಪಿಗೆ ಹೋದರು. ಇಂಥವರು ರಾಜಕೀಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಮುನಿರತ್ನ ಅವರದ್ದು ಬ್ಲಾಕ್ ಮೇಲ್ ರಾಜಕೀಯ. ತಮಗಾಗಿ ದುಡಿಯುವ ಕಾರ್ಯಕರ್ತರ ಮೇಲೆಯೇ ಸುಳ್ಳು ಕೇಸು ಹಾಕಿಸುವುದು ಅವರ ಅಭ್ಯಾಸ.‌ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸಾವಿರಾರು ಸುಳ್ಳು ಕೇಸ್ ಗಳನ್ನು ಮುನಿರತ್ನ ಹಾಕಿಸಿದ್ದಾರೆ ಎಂದು ಆರೋಪಿಸಿದರು.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group