ರಾಜ್ಯ ಸುದ್ದಿ

ಸರಕಾರದ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಖಾಸಗಿ ಶಾಲೆ ಮತ್ತು ಪೋಷಕರ ನಡುವೆ ಜಗಳ ತಂದಿಟ್ಟಿದೆ: ಸಿದ್ದರಾಮಯ್ಯ

ವರದಿಗಾರ (ಡಿ.21): ಖಾಸಗಿ ಶಾಲೆಗಳು ಮತ್ತು ಪೋಷಕರ ನಡುವೆ ಜಗಳ ತಂದಿಟ್ಟು ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳುವ ಪ್ರಯತ್ನ ನಡೆಸುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅರೋಪಿಸಿದ್ದಾರೆ. ಈ ಬಗ್ಗೆ ಟ್ವಿಟರ್‍ನಲ್ಲಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಅವರು, ಶಾಲೆ ಪುನರಾರಂಭದ ಬಗ್ಗೆ ಸರಣಿ ಸಭೆಗಳು. ಶಿಕ್ಷಣ ಸಚಿವರು ಮತ್ತು ಅಕಾರಿಗಳ ತರಹೇವಾರಿ ಹೇಳಿಕೆಗಳು ಪೋಷಕರನ್ನು ಗೊಂದಲಕ್ಕೆ ದೂಡಿವೆ ಎಂದು ಅವರು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಕ್ಷಣ ಸಚಿವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಖಾಸಗಿ ಶಾಲೆಗಳು ಮತ್ತು ಪೋಷಕರ ಸಭೆ ಕರೆದು ಪಾರದರ್ಶಕವಾಗಿ ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ತರಗತಿಗಳು ನಡೆಯದೆ ಇದ್ದರೂ ಬೋಧನಾ ಶುಲ್ಕದ ಜೊತೆಯಲ್ಲಿ ಪ್ರಯೋಗ ಶಾಲೆ, ಲೈಬ್ರೆರಿ ಮತ್ತಿತರ ಪಠ್ಯೇತರ ಶುಲ್ಕ ವಸೂಲಿಗೆ ಖಾಸಗಿ ಸಂಸ್ಥೆಗಳು ಮುಂದಾಗಿವೆ. ಸರ್ಕಾರದ ಪೊಳ್ಳು ಬೆದರಿಕೆಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ಜಗ್ಗುತ್ತಿಲ್ಲ ಎಂದಿರುವ ಸಿದ್ದರಾಮಯ್ಯ, ರಾಜ್ಯ ಸರ್ಕಾರ ಕೂಡ ಖಾಸಗಿ ಶಾಲೆಗಳ ಜೊತೆ ಶಾಮೀಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲ. ತರಗತಿಗಳಿಲ್ಲದೆ ಇದ್ದರೂ ಪೋಷಕರಿಂದ ಪೂರ್ಣಶುಲ್ಕ ವಸೂಲಿ ಮಾಡಲಾಗುತ್ತಿದೆ. ಶುಲ್ಕ ಪಾವತಿಸದಿದ್ದರೆ ಆನ್‍ಲೈನ್ ತರಗತಿಗಳನ್ನು ಸ್ಥಗಿತಗೊಳಿಸುವುದಾಗಿ ಪೋಷಕರನ್ನು ಬ್ಲಾಕ್‍ಮೇಲು ಮಾಡಲಾಗುತ್ತಿದೆ. ಸರ್ಕಾರ ಕಣ್ಣು ಮುಚ್ಚಿಕೊಂಡು ಕೂಳಿತಿದೆ ಎಂದು ಆರೋಪಿದರು.

ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿನ ಈಗಿನ ಬಿಕ್ಕಟ್ಟಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಶಿಕ್ಷಣಸಚಿವ ಸುರೇಶ್ ಕುಮಾರ್ ಅವರೇ ನೇರ ಹೊಣೆಗಾರರು. ಖಾಸಗಿ ಶಾಲೆ ಗಳ ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಜಗಳ ತಂದು ಹಾಕಿ ಇವರು ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಾಜ್ಯ ಸರ್ಕಾರದ ಎಡಬಿಡಂಗಿ ನಿಲುವು ಗಳಿಂದಾಗಿ ವಿದ್ಯಾರ್ಥಿಗಳು, ಪೋಷಕರು ಮತ್ತು ಖಾಸಗಿ ಶಾಲೆಗಳ ಮಾಲೀಕರು ಎಲ್ಲರೂ ಬೀದಿಗಿಳಿದಿದ್ದಾರೆ. ಕೂಡಲೇ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಂಡು ಬಿಕ್ಕಟ್ಟನ್ನು ಬಗೆಹರಿಸಿ ವಿದ್ಯಾರ್ಥಿಗಳನ್ನು ರಕ್ಷಿಸಬೇಕು ಎಂದು ಆಗ್ರಹಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group