ರಾಷ್ಟ್ರೀಯ ಸುದ್ದಿ

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ಪ.ಬಂಗಾಳದ ಸುವರ್ಣ ಯುಗದ ಕಾಲ ಮತ್ತೆ ಮರಳಲಿದೆ: ಅಮಿತ್ ಶಾ

ಬಂಗಾಳದ ಜನತೆ ಬದಲಾವಣೆಗೆ ಹಾತೊರೆಯುತ್ತಿದ್ದಾರೆ; ಅದು ಬಿಜೆಪಿ ಅಧಿಕಾರಕ್ಕೆ ಬಂದರೆ ಮಾತ್ರ ಸಾಧ್ಯ’

ವರದಿಗಾರ (ಡಿ.21): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ಪಶ್ಚಿಮ ಬಂಗಾಳದ ಸುವರ್ಣ ಯುಗದ ಕಾಲ ಮತ್ತೆ ಮರಳಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ನೇತೃತ್ವದ ರಾಜ್ಯ ಸರಕಾರದ ವಿರುದ್ಧ ಟೀಕಾಪ್ರಹಾರ ಮುಂದುವರಿಸಿದ ಶಾ, ರಾಜಕೀಯ ಹಿಂಸಾಚಾರ, ಭ್ರಷ್ಟಾಚಾರ, ಸುಲಿಗೆ, ಬಾಂಗ್ಲಾದೇಶೀಯರ ಅಕ್ರಮ ಒಳನುಸುಳುವಿಕೆಯಿಂದ ಬೇಸತ್ತಿರುವ ಪಶ್ಚಿಮ ಬಂಗಾಳದ ಜನತೆ ಬದಲಾವಣೆಗಾಗಿ ಹಾತೊರೆಯುತ್ತಿದ್ದಾರೆ ಅಮಿತ್ ಶಾ ಹೇಳಿದ್ದಾರೆ.

ಬೋಲ್‌ಪುರದಲ್ಲಿ ನಡೆದ ರೋಡ್‌ ಶೋನಲ್ಲಿ ಪಾಲ್ಗೊಂಡು ಮಾತನಾಡಿದ ಶಾ, ನನ್ನ ರಾಜಕೀಯ ಬದುಕಿನಲ್ಲಿ ಹಲವಾರು ರೋಡ್‌ಶೋ ಸಂಘಟಿಸಿದ್ದೇನೆ ಮತ್ತು ಅದರಲ್ಲಿ ಪಾಲ್ಗೊಂಡಿದ್ದೇನೆ. ಆದರೆ ಇಲ್ಲಿ ನಡೆದಂತಹ ಕಾರ್ಯಕ್ರಮವನ್ನು ಇದುವರೆಗೂ ಕಂಡಿಲ್ಲ. ಇದರಲ್ಲಿ ಪಾಲ್ಗೊಂಡ ಬೃಹತ್ ಜನಸ್ತೋಮ ಮಮತಾ ಬ್ಯಾನರ್ಜಿ ಸರಕಾರದ ವಿರುದ್ಧ ಇರುವ ವ್ಯಾಪಕ ಜನಾಕ್ರೋಶದ ದ್ಯೋತಕವಾಗಿದೆ. ಈ ಜನಸ್ತೋಮ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಸೂಚಿಯ ಬಗ್ಗೆ ಜನತೆಗಿರುವ ವಿಶ್ವಾಸದ ಪ್ರತೀಕವಾಗಿದೆ ಎಂದರು.

‘ಪಶ್ಚಿಮ ಬಂಗಾಳದ ಜನತೆ ಕೇವಲ ಜನನಾಯಕರ ಬದಲಾವಣೆಯನ್ನು ಮಾತ್ರ ಬಯಸುತ್ತಿಲ್ಲ. ಭ್ರಷ್ಟಾಚಾರ, ರಾಜಕೀಯ ಹಿಂಸಾಚಾರ, ಬಾಂಗ್ಲಾದೇಶೀಯರ ಒಳನುಸುಳುವಿಕೆಯಿಂದ ಮುಕ್ತರಾಗಲೂ ಹಂಬಲಿಸುತ್ತಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಮಾತ್ರ ಇದು ಸಾಧ್ಯ ಎಂದವರು ಅರಿತಿದ್ದಾರೆ’ ಎಂದು ಶಾ ಹೇಳಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group