ವರದಿಗಾರ (ಡಿ.21): ಒಳಜಗಳದಲ್ಲೇ ಬಿದ್ದಿರುವ ಕಾಂಗ್ರೆಸ್, ಗಲಭೆ, ಅರಾಜಕತೆ ಸೃಷ್ಟಿಸಿ ಅಧಿಕಾರ ಪಡೆಯುವ ಹುನ್ನಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಅವರು ಆರೋಪಿಸಿದ್ದಾರೆ.
ಬೆಂಗಳೂರಿನ ಖಾಸಗಿ ಹೊಟೇಲ್ನಲ್ಲಿ ನಡೆದ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಕಾಂಗ್ರೆಸ್ ತನ್ನ ಮರ್ಯಾದೆ ಉಳಿಸಿಕೊಳ್ಳಲು ಬೇರೆ ಬೇರೆ ತಂತ್ರ ಮಾಡುತ್ತಿದೆ. ಅಧಿಕಾರವನ್ನು ಕಳೆದುಕೊಂಡಾಗ ಕಾಂಗ್ರೆಸ್ ಗಲಭೆ, ಬೆಂಕಿ ಹಚ್ಚುವ ಕಾರ್ಯ ಮಾಡುತ್ತಿದೆ’ ಎಂದು ಹೇಳುವ ಮೂಲಕ ಗಲಭೆ, ಬೆಂಕಿ ಹಚ್ಚಿದರೆ ಅಧಿಕಾರ ಪಡೆಯಬಹುದೆಂದು ಪರೋಕ್ಷವಾಗಿ ಹೇಳಿದ್ದಾರೆ.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸೋಲಿಸಿದ್ದು ಕಾಂಗ್ರೆಸ್ನವರೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಆ ಪಕ್ಷದೊಳಗಿನ ಗುಂಪುಗಾರಿಕೆಯನ್ನು ಬಹಿರಂಗಪಡಿಸಿದ್ದಾರೆ. ಈ ಮೂಲಕ ಅವರು ಡಿ.ಕೆ.ಶಿವಕುಮಾರ್ಗೆ ಟಾಂಗ್ ನೀಡಿದ್ದು, ಕಾಂಗ್ರೆಸ್ ನ ಒಳಜಗಳದಿಂದ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸಿದ್ದಾರೆ.
