ವರದಿಗಾರ (ಡಿ.21): ರಾಜ್ಯ ರಾಜಕೀಯದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ವಿಲೀನ ಕುರಿತಂತೆ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್ ಬಿಟ್ಟು ಉಳಿದವರ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ದರಿದ್ದೇವೆ ಎಂಬ ಹೇಳಿಕೆ ಸದ್ಯ ರಾಜ್ಯ ರಾಜಕೀಯದಲ್ಲಿ ಎದ್ದಿರುವ ಸಂಶಯಕ್ಕೆ ಪುಷ್ಠಿ ನೀಡಿದ್ದಲ್ಲದೆ, ಪರೋಕ್ಷವಾಗಿ ಹೊಂದಾಣಿಕೆ ಮಾಡಿಕೊಳ್ಳುವ ಸೂಚನೆ ನೀಡಿದ್ದಾರೆ ಎಂದು ರಾಜಕೀಯ ವಿಮರ್ಶಕರು ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಬಿಜೆಪಿ ಜೊತೆ ಜೆಡಿಎಸ್ ವಿಲೀನ ಮಾಡಿಕೊಳ್ಳುವ ಕುರಿತು ಇದುವರೆಗೂ ಯಾವುದೇ ಚರ್ಚೆ ನಡೆದಿಲ್ಲ. ಯಾವ ಯಾವ ಪಕ್ಷಗಳು ವಿಲೀನ ಆಗುತ್ತವೆ ಎನ್ನುವುದು ಆಯಾ ಪಕ್ಷಕ್ಕೆ ಬಿಟ್ಟ ವಿಚಾರ. ನಮಗೆ ಬೆಂಬಲ ಕೊಡುತ್ತೇವೆ ಅಂದ್ರೆ ಬೆಂಬಲ ಪಡೆದುಕೊಳ್ಳುತ್ತೇವೆ. ಕಾಂಗ್ರೆಸ್ ಹಾಗೂ ಮುಸ್ಲಿಂ ಲೀಗ್ ಬಿಟ್ಟು ಉಳಿದವರ ಜೊತೆ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂದರು.
