ವರದಿಗಾರ (ಡಿ.23): ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಿಸಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಇಂದು (ಡಿಸೆಂಬರ್ 23) ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ವೀಡಿಯೋ ವೀಕ್ಷಿಸಿ:
ಯುಕೆಯಿಂದ ಬರುವ ಪ್ರತಿಯೊಬ್ಬರನ್ನೂ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗಲೇ ರಾಜ್ಯಕ್ಕೆ ಯುಕೆಯಿಂದ ಬಂದಿರುವಂತವರನ್ನು ಪತ್ತೆ ಹಚ್ಚಿ, ಅವರನ್ನು ಕೋವಿಡ್-19 ಸೋಂಕು ಪತ್ತೆಗಾಗಿ ಆರ್ ಟಿ-ಪಿಸಿಆರ್ ಮೂಲಕ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆ ಮೂಲಕ ಹೊಸ ಕೊರೋನಾ ರೂಪಾಂತರದ ಅಲೆಯ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ. ಆ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಎನು ಇರಲಿದೆ.?ತುರ್ತು ಸೇವೆಗಳಾದಂತ ಆಸ್ಪತ್ರೆ, ವೈದ್ಯಕೀಯ ಸೇವೆ, ಮೆಡಿಕಲ್ ಶಾಪ್ ಸೇರಿದಂತೆ ಇತರೆ ವ್ಯವಸ್ಥೆಗೆ ಮಾತ್ರ ರಾತ್ರಿ 10ರ ನಂತ್ರ ಬೆಳಿಗ್ಗೆ 6 ಗಂಟೆಯವರೆಗೆ ಅನುಮತಿ ನೀಡಲಾಗುತ್ತದೆ.
ಎನು ಇರೋದಿಲ್ಲ.? ತುರ್ತು ಸೇವೆ ಹೊರತುಪಡಿಸಿ, ಪಬ್, ಬಾರ್ ಅಂಡ್ ರೆಸ್ಟೋರೆಂಟ್, ವೈನ್ ಶಾಪ್, ಸಾರಿಗೆ ಸಂಚಾರ ವ್ಯವಸ್ಥೆ ಸೇರಿದಂತೆ ಎಲ್ಲವೂ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಬಂದ್ ಆಗಲಿವೆ.
