ರಾಜ್ಯ ಸುದ್ದಿ

ಪತ್ರಕರ್ತೆ ಗೌರಿ ಲಂಕೇಶ್ ದುಷ್ಕರ್ಮಿಗಳ ಗುಂಡೇಟಿಗೆ ಬಲಿ

ಖ್ಯಾತ ಪತ್ರಕರ್ತೆ ಮತ್ತು ಪ್ರಗತಿಪರ ಚಿಂತಕಿ ಗೌರಿ ಲಂಕೇಶರನ್ನು ಅವರ ಮನೆಯ ಬಳಿ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ಕೃತ್ಯ ನಡೆಸಿದೆ ಎಂದು ತಿಳಿದು ಬಂದಿದೆ. ಏಳು ಸುತ್ತಿನ ಗುಂಡು ಹಾರಿಸಿರುವ ದುಷ್ಕರ್ಮಿಗಳು, ಅದರಲ್ಲಿ ಮೂರು ಗುಂಡುಗಳು ಗೌರಿಯವರ ದೇಹದೊಳಗೆ ಹೊಕ್ಕಿವೆ ಎಂದು ತಿಳಿದುಬಂದಿದೆ. ಗೌರಿಯವರ ಎದೆ, ತಲೆ ಮತ್ತು ಹೃದಯ ಭಾಗಗಳಿಗೆ ಗುಂಡು ಹಾರಿಸಲಾಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ರಾತ್ರಿ 8.10 ರ ಸುಮಾರಿಗೆ ಘಟನೆ ನಡೆದಿದೆಯೆನ್ನಲಾಗಿದ್ದು, ಗೌರಿಯವರು ರಾಜರಾಜೇಶ್ವರಿ ನಗರದ ತಮ್ಮ ಮನೆಯ ಹೊರಗಡೆ ನಿಂತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

 

ಎಂ ಎಂ ಕಲ್ಬುರ್ಗಿಯ ಹತ್ಯೆ ಮಾದರಿಯಲ್ಲೇ ಈ ಹತ್ಯೆ ನಡೆದಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ

 

 

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group