ರಾಜ್ಯ ಸುದ್ದಿ

ಗೌರಿ ಲಂಕೇಶರ ಹತ್ಯೆ ಅಭಿವ್ಯಕ್ತಿ ಸ್ವಾತಂತ್ರ್ಯದ ದಮನ : ಪ್ರೊ. ಮುಝಫ್ಫರ್ ಅಸ್ಸಾದಿ

ರಾಜ್ಯದ ದಿಟ್ಟ ಪತ್ರಕರ್ತೆ, ಸಾಮಾಜಿಕ ಕಾರ್ಯಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್​ ಅವರನ್ನು ಬೆಂಗಳೂರಿನ ಅವರ ನಿವಾಸದ ಎದುರೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆಯನ್ನು ಮುಸ್ಲಿಂ ಚಿಂತಕರ ಚಾವಡಿಯು ತೀವ್ರವಾಗಿ ಖಂಡಿಸುತ್ತದೆ. ಗೌರಿ ಹಲವು ಚಳವಳಿಗಳ ಭಾಗವಾಗಿ ಕೆಲಸ ಮಾಡುತ್ತಿದ್ದ ಪತ್ರಕರ್ತೆ. ಅಂತಹ ಪತ್ರಕರ್ತೆಯನ್ನು ಗುಂಡಿಟ್ಟು ಹತ್ಯೆ ಮಾಡಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನ ಮಾಡುವ ಪ್ರಯತ್ನವಾಗಿದೆ. ಗೌರಿ ಲಂಕೇಶ್​ ಕೋಮುವಾದಿ ಹಾಗೂ ಫ್ಯಾಸಿಸ್ಟ್​ ಶಕ್ತಿಗಳ ವಿರುದ್ಧ ಪ್ರಬಲವಾಗಿ ಹೋರಾಟಕ್ಕೆ ಇಳಿದಿದ್ದ ಸಾಮಾಜಿಕ ಕಾರ್ಯಕರ್ತೆ. ಹೀಗಾಗಿ ಈ ಹತ್ಯೆಯ ಹಿಂದೆ ಮತೀಯ ಶಕ್ತಿಗಳ ಕೈವಾಡ ಇದೆಯೇ ಎಂಬ ಅನುಮಾನ ನಮ್ಮನ್ನು ತೀವ್ರವಾಗಿ ಕಾಡುತ್ತಿದೆ ಎಂದು ಮುಸ್ಲಿಂ ಚಿಂತಕರ ಚಾವಡಿಯ ರಾಜ್ಯಾಧ್ಯಕ್ಷರೂ ಹಾಗೂ ಖ್ಯಾತ ರಾಜಕೀಯ ವಿಶ್ಲೇಷಕರೂ ಆಗಿರುವ ಪ್ರೊಫೆಸರ್ ಮುಝಫ್ಫರ್ ಅಸ್ಸಾದಿ ಸಂಶಯ ವ್ಯಕ್ತಪಡಿಸಿದ್ದಾರೆ. ಎಂ ಎಂ ಕಲ್ಬುರ್ಗಿಯವರ ಹತ್ಯೆಗೂ ಈ ಹತ್ಯೆಗೂ ಸಾಮ್ಯತೆ ಇದೆ ಎಂಬ ಮಾಹಿತಿಗಳು ಹೊರ ಬರುತ್ತಿವೆ. ಹೀಗಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕಿದೆ. ಸಮಾಜದ ಸ್ವಾಸ್ಥ್ಯ ಕಾಪಾಡುವ ಪತ್ರಕರ್ತರು, ಪ್ರಗತಿಪರರ ರಕ್ಷಣೆಗೆ ಸರ್ಕಾರ ಮುಂದಾಗಬೇಕಿದೆ. ಇಂತಹ ಘಟನೆಗಳು ಮುಂದುವರೆಯದಂತೆ ಕ್ರಮ ಜರುಗಿಸಬೇಕಿದೆ. ಗೌರಿ ಲಂಕೇಶ್​ ಅವರ ಹತ್ಯೆಯ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸುತ್ತೇವೆ ಎಂದವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group