ಜಿಲ್ಲಾ ಸುದ್ದಿ

ಗೌರಿ ಲಂಕೇಶ್ ಹತ್ಯೆ ಫ್ಯಾಶಿಸ್ಟ್ ವಿರುದ್ಧದ ಧ್ವನಿಯನ್ನು ಇಲ್ಲವಾಗಿಸುವ ಪ್ರಯತ್ನ: ಸುನ್ನೀ ಸಾಹಿತ್ಯ ಮಂಡಳಿ

ವರದಿಗಾರ-ಮಂಗಳೂರು: ಸಮಾಜದಲ್ಲಿ ಆಳವಾಗಿ ಬೇರೂರಿರುವ ಫ್ಯಾಶಿಸಂ ಸಿದ್ದಾಂತವನ್ನು ತನ್ನ ಹರಿತವಾದ ಲೇಖನಿಯಿಂದ ಖಂಡಿಸುತ್ತಿದ್ದ ದಿಟ್ಟ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ರವರ ಕೊಲೆಯನ್ನು ಸುನ್ನೀ ಸಾಹಿತ್ಯ ಮಂಡಳಿ ಖಂಡಿಸಿದೆ.
ಡಾ.ಎಂ.ಎಂ. ಕಲ್ಬುರ್ಗಿ, ಗೌರಿ ಲಂಕೇಶ್ ರಂತವರನ್ನು ಸಾಯಿಸುವುದರ ಮೂಲಕ ಫ್ಯಾಶಿಸಂ ವಿರುದ್ಧದ ಧ್ವನಿಯನ್ನು ಇಲ್ಲವಾಗಿಸುವ ಪ್ರಯತ್ನ ನಡೆಸುತ್ತಿದ್ದಾರೆ. ಪ್ರಗತಿಪರ ಸಾಹಿತಿ ಕಲ್ಬುರ್ಗಿಯವರ ಹತ್ಯೆಯ ನೆನಪು ಮಾಸುವ ಮುನ್ನವೇ ಗೌರಿ ಲಂಕೇಶ್ ರವರನ್ನು ಕೊಂದದ್ದು ಇಲ್ಲಿನ ನ್ಯಾಯಾಂಗ ವ್ಯವಸ್ಥೆಯನ್ನು ಅಣಕಿಸುವಂತಿದೆ.
ಯಾವುದೇ ಒತ್ತಡಗಳಿಗೆ ಮಣಿಯದೆ ರಾಜ್ಯ ಸರ್ಕಾರವು ಗೌರಿ ಲಂಕೇಶ್ ರವರ ಕೊಲೆಯ ಆರೋಪಿಗಳನ್ನು ಬಂಧಿಸುವುದರ ಜೊತೆಗೆ ಅದರ ಹಿಂದಿರುವ ಶಕ್ತಿಗಳನ್ನು ಮಟ್ಟಹಾಕಬೇಕೆಂದು ಸುನ್ನೀ ಸಾಹಿತ್ಯ ಮಂಡಳಿ ಮಾಧ್ಯಮ ಕಾರ್ಯದರ್ಶಿ ಶಾಕಿರ್ ಅಹ್ಮದ್ ಎಮ್ಮೆಸ್ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group