ವರದಿಗಾರ-ತುಮಕೂರು: ಸಾಮಾಜಿಕ ಹೋರಾಟಗಾರ್ತಿ, ಪ್ರಗತಿಪರ ಚಿಂತಕಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ರವರ ಹತ್ಯೆಯ ಹಂತಕರು ಯಾರೇ ಆಗಿದ್ದರೂ ಪೊಲೀಸರು ಅವರನ್ನು ಬಂಧಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಒತ್ತಾಯಿಸಿದ್ದಾರೆ.
ಸಿದ್ದಗಂಗಾ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ಉದ್ಘಾಟನೆಗೆ ಮೊದಲು ಮಾಧ್ಯಮದೊಂದಿಗೆ ಮಾತನಾಡುತ್ತಾ, ಮೇಲಿನ ಮಾತನ್ನು ಹೇಳಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ, ಕೊಲೆ, ಸುಲಿಗೆ ಮಿತಿಮೀರಿದೆ. ಇವುಗಳೆಲ್ಲದಕ್ಕೂ ಅಂತ್ಯವಾಗಿಸಿ ಮಾದರಿ ರಾಜ್ಯ ನಿರ್ಮಾಣ ಮಾಡುವ ಕನಸಿದೆ. ಸಿದ್ದಗಂಗಾಶ್ರೀಗಳ ಆಶೀರ್ವಾದ ನನಸಾಗುವ ಭರವಸೆ ಇದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
