ವರದಿಗಾರ-ಬೆಂಗಳೂರು: ಮುಂದಿನ ಪ್ರಧಾನಿ ನಾನೇ ಎಂಬ ರಾಹುಲ್ ಗಾಂಧಿ ಹೇಳಿಕೆಗೆ ಭಾರತೀಯ ಜನತಾ ಪಾರ್ಟಿ (ಬಿಜೆಪಿ)ಯ ಕರ್ನಾಟಕ ಘಟಕ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯಿಸುತ್ತಾ, ರಾಹುಲ್ ಗಾಂಧಿಯು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಹೇಳಿದ್ದಾರೆ.
ಜಗತ್ತು ಮೆಚ್ಚಿದ ಪ್ರಧಾನಿ ಬಗ್ಗೆ ಬಾಯಿಗೆ ಬಂದಂತೆ ಮಾತಾಡೋದು ಸರಿಯಲ್ಲ. ಇದು ರಾಹುಲ್ ಗಾಂಧಿಯ ಚೈಲ್ಡಿಶ್ ಬುದ್ದಿಯನ್ನು ತೋರಿಸುತ್ತದೆ ಎಂದು ಹೇಳುತ್ತಾ ವ್ಯಂಗ್ಯವಾಡಿದ್ದಾರೆ.
ಇದೇ ಸಂದರ್ಭ, ಮುಂದಿನ ನಾಲ್ಕೈದು ದಿನಗಳಲ್ಲಿ ಮುಖ್ಯಮಂತ್ರಿ ಮತ್ತು ಕೆಲ ಸಚಿವರ ಹಗರಣಗಳ ದಾಖಲೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದಾರೆ.
