ರಾಜ್ಯ ಸುದ್ದಿ

ಗೌರಿಯನ್ನು ಗೊತ್ತಿಲ್ಲ, ಅವರಪ್ಪನನ್ನೂ ಗೊತ್ತಿಲ್ಲ ಎಂದ ಪ್ರಭಾಕರ್ ಭಟ್

ವರದಿಗಾರ-ಮೈಸೂರು: ಹಿರಿಯ ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ, ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ರವರ ಹತ್ಯೆಯ ಕುರಿತು ಮಾಧ್ಯಮ ಪ್ರತಿನಿಧಿಗಳು ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ರವರೊಂದಿಗೆ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ನನಗೆ ಗೌರಿ ಲಂಕೇಶ್ ಯಾರೆಂದು ಗೊತ್ತಿಲ್ಲ ಮತ್ತು ಅವರಪ್ಪನನ್ನೂ ಗೊತ್ತಿಲ್ಲ ಎಂಬ ಬೇಜವ್ದಾರಿಯುತ ಹೇಳಿಕೆಯನ್ನು ನೀಡಿದ್ದಾರೆ.

ಅವರ ಪತ್ರಿಕೆಯನ್ನು ನಾನು ಓದುವುದೂ ಇಲ್ಲ ಎಂದು ಹೇಳಿಕೊಂಡಿದ್ದಾರೆ. ಅವರು ಇಂದು ಭಿಕ್ಷಾಂದೇಹಿ ಎಂಬ ಸಾಮಾಜಿಕ ಅಭಿಯಾನದ ಪ್ರಯುಕ್ತ ಮೈಸೂರಿಗೆ ಆಗಮಿಸಿ ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.

ಗೌರಿ ಲಂಕೇಶ್ ತನ್ನ ಪ್ರತಿಕೆಯಲ್ಲಿ ನನ್ನ ಬಗ್ಗೆ ಬರೆದ ವಿಚಾರಕ್ಕೂ ನನಗೂ ಸಂಬಂಧವಿಲ್ಲ. ಇನ್ನು ನಮ್ಮದು ಎಡವೂ ಅಲ್ಲ, ಬಲವೂ ಅಲ್ಲ, ಕೇವಲ ರಾಷ್ಟ್ರೀಯವಾದವಾಗಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿಕೊಂಡಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

This poll has been finished and no longer available to vote !

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group