ವರದಿಗಾರ-ಬೆಂಗಳೂರು: ನನ್ನ ಸರಕಾರ ಅಥವಾ ಕುಟುಂಬದವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ದಾಖಲೆಗಳಿದ್ದಲ್ಲಿ ಬಹಿರಂಗಪಡಿಸಿ. ಸುಮ್ ಸುಮ್ಮನೆ ಹಾದಿ ಬೀದಿಯಲ್ಲಿ ಬಡಾಯಿ ಕೊಚ್ಚಿಕೊಳ್ಳುವುದು ಬೇಡ. ದಾಖಲೆ ನೀಡಿದರೆ ಬಹಿರಂಗ ಚರ್ಚೆಗೆ ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಹೇಳಿಕೆ ನಿಡಿದ್ದ ಸಿದ್ದರಾಮಯ್ಯ ಹಾಗು ಸಚಿವರ ಭ್ರಷ್ಟಾಚಾರ ಪ್ರಕರಣವನ್ನು ಮುಂದಿನ ನಾಲ್ಕು ದಿನಗಳಲ್ಲಿ ಬಹಿರಂಗ ಪಡಿಸುತ್ತೇವೆ ಎಂಬ ಹೇಳಿಕೆಗೆ ತಿರುಗೇಟು ನೀಡುತ್ತಾ, ಬಿಜೆಪಿ ಗೆ ಬಹಿರಂಗ ಸವಾಲು ಹಾಕಿದ್ದಾರೆ.
ಅವರು ಬುಧವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಹೀಗೆ ಹೇಳಿದ್ದಾರೆ.
ರಾಹುಲ್ ಗಾಂಧಿ ಪ್ರಧಾನಿ ಆಗುವುದು ತಿರುಕನ ಕನಸು ಎಂಬ ಯಡಿಯೂರಪ್ಪನವರ ಹೇಳಿಕೆಯು ಬಾಲಿಶತನ ಕೂಡಿದ್ದು, ರಾಜೀವ್ ಗಾಂಧಿ ಯಾವ ವಯಸ್ಸಿನಲ್ಲಿ ಪ್ರಧಾನಿಯಾಗಿದ್ದರು ಎಂಬುದು ಯಡಿಯೂರಪ್ಪ ಅವರಿಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಹೀಗೆ ಮಾತನಾಡಿದ ತಕ್ಷಣ ಬಿಜೆಪಿಯ ಮಿಷನ್–150 ಈಡೇರುತ್ತದೆಯೇ ಎಂದು ಅವರು ಕೇಳಿದ್ದಾರೆ.
