ರಾಷ್ಟ್ರೀಯ ಸುದ್ದಿ

ಗೋ ರಕ್ಷಕರ ಅಟ್ಟಹಾಸಕ್ಕೆ ಹತ್ಯೆಯಾದ ಪೆಹ್ಲುಖಾನ್ ಆರೋಪಿಗಳಿಗೆ ಕ್ಲೀನ್ ಚಿಟ್ ನೀಡಿದ ಪೊಲೀಸರು

ಬಲವಾದ ಸಾಕ್ಷ್ಯ ಸಿಗದ ಕಾರಣ ಆರೋಪಿಗಳಿಗೆ ಕ್ಲೀನ್‌ ಚಿಟ್‌ ನೀಡಲಾಗಿದೆ ಎಂದು ಸಮರ್ಥಿಸಿಕೊಂಡ ಪೊಲೀಸ್ ಅಧಿಕಾರಿಗಳು

ವರದಿಗಾರ-ರಾಜಸ್ತಾನ: ರಾಜಸ್ತಾನದ ಅಲ್ವಾರ್ ನಲ್ಲಿ ದನಗಳನ್ನು ಸಾಗಣೆ ಮಾಡುತ್ತಿದ್ದ ಆರೋಪದಲ್ಲಿ 55ವರ್ಷದ ಪೆಹ್ಲೂ ಖಾನ್ ರನ್ನು ಗೋ ರಕ್ಷಕರು ಹೊಡೆದು ಹತ್ಯೆಗೈದಿದ್ದ ಪ್ರಕರಣದಲ್ಲಿ ಹಿಂದೂ ಪರ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ 6 ಆರೋಪಿಗಳಿಗೆ ರಾಜಸ್ತಾನ ಪೊಲೀಸರು ಕ್ಲೀನ್‌ ಚಿಟ್‌ ನೀಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಆರೋಪಿಗಳ ಬಗ್ಗೆ ಬಲವಾದ ಸಾಕ್ಷ್ಯ ಸಿಗದ ಕಾರಣ ಆರೋಪಿಗಳಿಗೆ ಕ್ಲೀನ್‌ ಚಿಟ್‌ ನೀಡಲಾಗಿದೆ ಎಂದು ಪೊಲೀಸ್‌ ಇಲಾಖೆಯ ಉನ್ನತ ಮೂಲಗಳು ಕ್ಲೀನ್ ಚಿಟ್ ಬಗ್ಗೆ ಸಮರ್ಥಿಸಿಕೊಂಡಿದೆ.

ಇನ್ನುಳಿದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಇನ್ನೂ ತಲೆಮರೆಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳನ್ನು ಬಂಧಿಸಿದ ಬಳಿಕ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಲಾಗುವುದು ಎಂದು ಪೊಲೀಸರು ಹೇಳಿಕೆ ನೀಡಿದ್ದಾರೆ.

 

Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group