ವರದಿಗಾರ-ಬೆಳಗಾವಿ: ಬಿಜೆಪಿಯವರು ಎಷ್ಟೆ ಕಿರುಚಾಡಿದರೂ ಅಧಿಕಾರಕ್ಕೆ ಬರುವುದಿಲ್ಲ.ಬಿಜೆಪಿಯ ಅಮಿತ್ ಶಾ ಮತ್ತು ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಳಗಾವಿ, ಸುಳೇಬಾವಿಯಲ್ಲಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡುತ್ತಿದ್ದರು.
ಬಿಜೆಪಿಗೆ ರಾಜ್ಯದಲ್ಲಿ 50 ಸ್ಥಾನ ಕೂಡಾ ಬರುವುದಿಲ್ಲ. ಹಾಗಾಗಿ ರಾಜ್ಯದಲ್ಲಿ ಕೋಮುಗಲಭೆಯನ್ನು ನಡೆಸಿ ಎಂದು ಅಮಿತ್ ಶಾ ಸೂಚನೆ ನೀಡಿ ಹೋಗಿದ್ದಾರೆ ಎಂದು ಹೇಳಿದ್ದಾರೆ.
ನಮ್ಮ ವಿರುದ್ಧ ಚಾರ್ಜ್ ಸೀಟ್ ಹಾಕಲು ಹೊರಟಿದ್ದಾರೆ. ಅವರಿಗೆ ಮಾನ ಮರ್ಯಾದೆ ಇದೆಯಾ ಎಂದು ಪ್ರಶ್ನಿಸಿದ್ದಾರೆ. ನಾವು 4 ವರ್ಷ 4 ತಿಂಗಳ ಅವಧಿಯಲ್ಲಿ ಒಂದೇ ಒಂದು ಹಗರಣ ಮಾಡಿಲ್ಲ. ನೀಡಿದ 165 ಭರವಸೆಯಲ್ಲಿ 155 ಭರವಸೆ ಈಡೇರಿಸಿದ್ದೇವೆ ಎಂದು ಹೇಳಿದ್ದಾರೆ.
