ವರದಿಗಾರ-ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಪಟ್ರೆ ಮಜಲು ಗ್ರಾಮದ 22 ವರ್ಷ ವಯಸ್ಸಿನ ಬೀಡಿ ಕಾರ್ಮಿಕ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ, ಮಹಿಳೆಯ ಮೇಲೆ ಅತ್ಯಾಚಾರಗೈದ ಬಳಿಕ, ಸೈನೈಡ್ ನೀಡಿ ಕೊಲೆ ಮಾಡಿದ್ದ ಸೈನೈಡ್ ಕಿಲ್ಲರ್ ಕೆ. ಮೋಹನ್ ಕುಮಾರ್ ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಸೈನೈಡ್ ಮೋಹನ್ಗೆ ಜೀವಾವಧಿ ಶಿಕ್ಷೆ ಮತ್ತು 26 ಸಾವಿರ ದಂಡ ವಿಧಿಸಿ ನಗರದ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.
ಮೋಹನ್ ಅಪರಾಧಿ ಎಂದು ನ್ಯಾಯಾಧೀಶ ಡಿ.ಟಿ. ಪುಟ್ಟರಂಗಸ್ವಾಮಿ ಅವರು ಬುಧವಾರ ತೀರ್ಪು ಪ್ರಕಟಿಸಿದ್ದರು.
