ವರದಿಗಾರ-ಶಹಾಪುರ: ರಾಜ್ಯ ಸೇರಿದಂತೆ ಇಡೀ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವ ಹಗಲುಗನಸನ್ನು ಪ್ರಧಾನಿ ನರೇಂದ್ರ ಮೋದಿ ಕಾಣುತ್ತಿದ್ದಾರೆ.
ಆದರೆ ನಾನು ಕರ್ನಾಟಕವನ್ನು ಹಿಂದೂ ರಾಜ್ಯವನ್ನಾಗಲು ಬಿಡುವುದಿಲ್ಲ ಎಂದು ಜೆಡಿಎಸ್ ನಾಯಕ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಎಚ್ಚರಿಕೆ ನೀಡಿದ್ದಾರೆ.
ಅವರು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಜೆಡಿಎಸ್ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ಮಾತನಾಡುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಲ್ಲಿ ಅಲ್ಪಸಂಖ್ಯಾತರು ಕ್ರೈಸ್ತರು , ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕು ಇದೆ. ಅಲ್ಲಿ ಕೋಮು ಭಾವನೆ ಕೆರಳಿಸಿ ಸಾಮರಸ್ಯ ಜೀವನಕ್ಕೆ ಧಕ್ಕೆ ತಂದಿರುವುದು ಸರಿಯಲ್ಲ. ಕೋಮುಗಲಭೆಯನ್ನು ಹತ್ತಿಕ್ಕುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಕಾರವಾರದ ಬೆಂಕಿಯುಂಡೆಯನ್ನು ಕೇಂದ್ರದ ಸಚಿವರನ್ನಾಗಿ ಮಾಡಿ ಕಳುಹಿಸಿರುವೆ ಎಂಬ ಬಿಜೆಪಿ ಮುಖಂಡರ ಕುಹಕದ ಮಾತುಗಳನ್ನು ನಾವು ಗಂಭೀರವಾಗಿ ಪರಿಗಣಿಸಬೇಕು ಎಂದು ಇದೇ ಸಂದರ್ಭ ಹೇಳಿದ್ದಾರೆ.
