ರಾಷ್ಟ್ರೀಯ ಸುದ್ದಿ

ಬಡವರ ಕಲ್ಯಾಣಕ್ಕಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಲಾಗಿದೆ ಎಂದ ಕೇಂದ್ರ ಸಚಿವ ಅಲ್ಫಾನ್ಸೊ

ವರದಿಗಾರ-ದೆಹಲಿ: ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಕೇಂದ್ರ ಸಚಿವ ಅಲ್ಫಾನ್ಸೊ ರವರು “ಈ ಬೆಲೆ ಏರಿಕೆಯು ಬಡವರ ಕಲ್ಯಾಣಕ್ಕಾಗಿ ಮಾಡಲಾಗಿದೆ” ಎಂದು ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ.
ಗಗನಕ್ಕೇರುತ್ತಿರುವ ಪೆಟ್ರೋಲ್ ಬೆಲೆ ಏರಿಕೆಯ ಬಗ್ಗೆ ಅಲ್ಫಾನ್ಸೊ ರವರು ಉತ್ತರಿಸುತ್ತಾ, ಪೆಟ್ರೋಲ್ ಡೀಸೆಲ್ ಖರೀದಿಸಲು ಸಮರ್ಥರಿರುವ ಜನರು ಈ ಬೆಲೆ ಏರಿಕೆಯನ್ನು ಸಹಿಸಲೇಬೇಕು. ಇದರಿಂದ ಬಡವರಿಗೆ ಸಹಾಯವಾಗಲಿದೆ. ಇದು ಬಡವರ ಕಲ್ಯಾಣಕ್ಕಾಗಿದೆ. ಬಡವರ ಉತ್ತಮ ಜೀವನಕ್ಕೆ ಇದು ಸಹಕಾರಿಯಾಗಲಿದೆ. ಈ ಹಣದಿಂದ ಪ್ರತಿ ಗ್ರಾಮಗಳಿಗೂ ವಿದ್ಯುತ್ ತಲುಪಲಿದೆ. ಎಲ್ಲಾ ಕಡೆ ಶೌಚಾಲಯ ನಿರ್ಮಿಸಲಾಗುವುದು. ಬಡವರಿಗಾಗಿ ಮನೆ ನಿರ್ಮಾಣ ಮಾಡಲಾಗುವುದು ಎಂದು ತನ್ನ ಹೇಳಿಕೆಯಲ್ಲಿ ಹೇಳಿಕೊಂಡಿದ್ದಾರೆ.
ಕೇಂದ್ರ ಸರಕಾರವು ಎಲ್ಲಾ ಪೆಟ್ರೋಲಿಯಂ ಕಂಪನಿಗಳಿಗೆ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿಗದಿಪಡಿಸಲು ಅನುಮತಿ ನೀಡಿತ್ತು. ಈ ಕಾರಣದಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಕೇಂದ್ರ ಮಂತ್ರಿ ಸ್ಥಾನದಲ್ಲಿರುವ ಜವಾಬ್ದಾರಿಯುತ ವ್ಯಕ್ತಿಯಿಂದ ಇಂತಹಾ ಬೇಜವಾಬ್ದಾರಿ ಹೇಳಿಕೆಗಳು ಜನಸಾಮಾನ್ಯರ ಗಾಯದ ಮೇಲೆ ಬರ ಎಳೆದಂತಾಗಿದೆ.

 

ಮೋದಿ ಸರಕಾರವು ರೈತ ವಿರೋಧಿಯೇ?

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group