ವರದಿಗಾರ-ದೆಹಲಿ: ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಬಿಸಿಸಿಐನಲ್ಲಿ ಸೂಕ್ತ ಪ್ರೋತ್ಸಾಹ ದೊರೆಯದ ಕಾರಣ ಭಾರತ ಕ್ರಿಕೆಟ್ ತಂಡದ ಕೋಚ್ ಹುದ್ದೆ ಕೈತಪ್ಪಿತು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ವೀರೇಂದ್ರ ಸೆಹ್ವಾಗ್ ಬೇಸರ ವ್ಯಕ್ತಪಡಿಸಿದ್ದರು ಹಾಗೂ ಇನ್ನೆಂದೂ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದರು.
ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಭಾರತ ತಂಡದ ಮಾಜಿ ನಾಯಕ ಹಾಗೂ ಕ್ರಿಕೆಟ್ ಸಲಹಾ ಸಮಿತಿ(ಸಿಎಸಿ) ಸದಸ್ಯರಾಗಿರುವ ಸೌರವ್ ಗಂಗೂಲಿ, ಸೆಹ್ವಾಗ್ ಮಾತುಗಳು ಮೂರ್ಖತನದಿಂದ ಕೂಡಿದ್ದು ಎಂದು ಹೇಳಿದ್ದಾರೆ.
ಈ ಮೂಲಕ ಸೆಹ್ವಾಗ್ ವಿರುದ್ಧ ನೇರವಾಗಿ ಗಂಗೂಲಿಯವರು ಚಾಟಿಯೇಟು ಬೀಸಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಕೋಚ್ ಆಯ್ಕೆಯ ವೇಳೆ ಹಲವು ಗೊಂದಲಗಳ ನಡುವೆಯೂ, ನಾಯಕ ಕೊಹ್ಲಿಯವರ ಬೆಂಬಲದಿಂದಾಗಿ ರವಿಶಾಸ್ತ್ರಿ ಕೋಚ್ ಆಗಿ ಆಯ್ಕೆಯಾಗಿದ್ದರು. ಈ ಕುರಿತು ಸೆಹ್ವಾಗ್ ಅವರಿಗೆ ಅಸಮಾಧಾನವಿತ್ತೆನ್ನಲಾಗಿದೆ
