ಜಿಲ್ಲಾ ಸುದ್ದಿ

ಪೋಲಿಸ್ ಅಧಿಕಾರಿಗಳ ವಿರುದ್ಧ ಅವಾಚ್ಯ ಭಾಷಣ ಖಂಡನೀಯ – ಕ್ಯಾಂಪಸ್ ಫ್ರಂಟ್

ವರದಿಗಾರ ಪುತ್ತೂರು : ಪುತ್ತೂರು ತಾಲೂಕಿನ ಗ್ರಾಮಾಂತರ ಸಂಪ್ಯ ಪೋಲಿಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಬ್ದುಲ್ ಖಾದರ್ ಹಾಗೂ ಸಿಬಂದಿಗಳಾದ ಚಂದ್ರ ಮತ್ತು ರುಕ್ಮಯ್ಯರ ವಿರುದ್ಧ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ ಹಮ್ಮಿಕೊಂಡಿದ್ದು, ಪ್ರತಿಭಟನಾ ಸಭೆಯಲ್ಲಿ ಪೋಲಿಸ್ ಅಧಿಕಾರಿಗಳ ವಿರುದ್ಧ ಅವಾಚ್ಯ ಶಬ್ಧಗಳಿಂದ ಭಾಷಣ ಮಾಡಿದ್ದು ಖಂಡನೀಯ.

ಆರ್.ಎಸ್.ಎಸ್ ಪ್ರಮುಖರು ಬಂದು ಶಾಂತಿ ಸೌಹಾರ್ದತೆಯಿಂದಿರುವ ಪುತ್ತೂರು ತಾಲೂಕಿನಲ್ಲಿ ಪೋಲಿಸರ ವಿರುದ್ಧ ಪ್ರಚೋದನಾಕಾರಿ ಭಾಷಣಗಳನ್ನು ಮಾಡಿ ಕೋಮುಗಲಭೆಗೆ ಕುಮ್ಮಕ್ಕು ನೀಡಿದಂತಾಗಿದೆ. ಪೋಲಿಸರ ವಿರುದ್ಧ ಅವಾಚ್ಯ ಶಬ್ದಗಳಿಂದ ಭಾಷಣ ಮಾಡಿದ್ದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ತಾಲೂಕು ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಅದೇ ರೀತಿ ಅವಾಚ್ಯ ಶಬ್ಧಗಳಿಂದ ಭಾಷಣ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಅವರ ವಿರುದ್ಧ ಸ್ವಯಂ ಪ್ರೇರಿತ ಕೇಸು ದಾಖಲಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಇದರ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮೋದಿ ಸರಕಾರವು ರೈತ ವಿರೋಧಿಯೇ?

This poll has been finished and no longer available to vote !

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group