ವರದಿಗಾರ-ಗುಲ್ಬರ್ಗಾ: ಎಲ್ಲಾ ದಾಖಲೆಗಳು ಕೈಯ್ಯಲ್ಲಿದೆ. ಕೆಲ ದಾಖಲೆಗಳು ಸಿಗದೇ ಬಿಡುಗಡೆ ಮಾಡುವುದು ವಿಳಂಬವಾಗಿತ್ತು. 4-5 ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರು, ಕುಟುಂಬದ ಸದಸ್ಯರು, ನಾಲ್ಕು ಜನ ಸಚಿವರು, ಮೂವರು ಶಾಸಕರು ಮತ್ತು ಇಬ್ಬರು ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿ, ರಾಜ್ಯ ಕಾಂಗ್ರೆಸ್ ಸರಕಾರದ ಮಾನ ಹರಾಜು ಹಾಕುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ನನ್ನ ವಿರುದ್ಧ ಸಿದ್ದರಾಮಯ್ಯ, ಸಚಿವ ರಮೇಶ್ ಜಾರಕಿಹೊಳಿ ಯಾರು ಬೇಕಾದರೂ ಸ್ಪರ್ಧಿಸಬಹುದು. ಅವರಿಗೆ ಮುಕ್ತ ಮನಸ್ಸಿನಿಂದ ಸ್ವಾಗತ ಕೋರುತ್ತೇನೆ ಎಂದು ಚುನಾವಣಾ ಸ್ಪರ್ಧೆಗೆ ಆಹ್ವಾನ ನೀಡಿದ್ದಾರೆ.
ಉತ್ತರ ಕರ್ನಾಟಕದ ವಿಜಯಪುರ ಅಥವಾ ಬಾಗಲಕೋಟೆಯಿಂದ ಸ್ಪರ್ಧಿಸುವಂತೆ ಕಾರ್ಯಕರ್ತರು ಅಪೇಕ್ಷೆ ಪಟ್ಟಿದ್ದಾರೆ. ಹೈಕಮಾಂಡ್ ಕೂಡ ಕ್ಷೇತ್ರ ಬದಲಾವಣೆ ಮಾಡುವಂತೆ ಸೂಚಿಸಿದೆ. ಹೀಗಾಗಿ ಈ ಬಾರಿ ವಿಜಯಪುರ ಅಥವಾ ಬಾಗಲಕೋಟೆಯಿಂದ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.
