ವರದಿಗಾರ-ಬೆಂಗಳೂರು: ಕಲಬುರ್ಗಿ ಉತ್ತರ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಮಾಜಿ ಸಚಿವ ಖಮರುಲ್ ಇಸ್ಲಾಂ(69) ಹೃದಯಾಘಾತದಿಂದ ಸೋಮವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದಲ್ಲಿ ಮೊದಲ ಮೂರು ವರ್ಷ ಸಚಿವರಾಗಿದ್ದ ಖಮರುಲ್ ಇಸ್ಲಾಂ, ಒಂದು ವರ್ಷದ ಹಿಂದೆ ನಡೆದ ಸಚಿವ ಸಂಪುಟ ಪುನರ್ ರಚನೆ ವೇಳೆ ಸಚಿವ ಸ್ಥಾನ ಕಳೆದುಕೊಂಡಿದ್ದರು. ಬಳಿಕ ಅವರನ್ನು ಕೇರಳ ಕಾಂಗ್ರೆಸ್ ಉಸ್ತುವಾರಿ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಒಂದು ಬಾರಿ ಸಂಸದರಾಗಿಯೂ ಆಯ್ಕೆಯಾಗಿದ್ದರು.
6 ಬಾರಿ ಶಾಸಕರಾಗಿದ್ದು, 2 ಬಾರಿ ಸಚಿವರಾಗಿ ಆಯ್ಕೆಯಾಗಿದ್ದರು. ಖಮರುಲ್ ಇಸ್ಲಾಂ ಆಕಾಲಿಕ ಮರಣಕ್ಕೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.
