ಸುತ್ತ-ಮುತ್ತ

ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ

ವರದಿಗಾರ-ಮಂಗಳೂರು: ಮೌನತುಲ್ ಮಸಾಕೀನ್ ತಾಳಿಪಡ್ಪು ಹಾಗು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ಯೇನಪೋಯ ಆಸ್ಪತ್ರೆ ದೇರಳಕಟ್ಟೆ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವು ಇತ್ತೀಚೆಗೆ ನಡೆಯಿತು.

ಶಿಬಿರದಲ್ಲಿ 63 ಮಂದಿ ರಕ್ತದಾನ ಮಾಡಿದರು. ಹಾಗೂ ಹಲವರು ಉಚಿತ ಆರೋಗ್ಯ ತಪಾಸಣೆಯ ಸದುಪಯೋಗ ಪಡೆದರು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಯೇನಪೋಯ ಮೆಡಿಕಲ್ ಕಾಲೇಜ್ ಬ್ಲಡ್ ಬ್ಯಾಂಕ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಕಾರ್ಯಕಮವು ತಾಳಿಪಡ್ಪು ಹಿದಾಯತುಲ್ ಇಸ್ಲಾಂ ಮದ್ರಸದ ಅಧ್ಯಕ್ಷರಾದ ಫಲುಲ್ ತಂಙಳ್ ರ ಅಧ್ಯಕ್ಷತೆಯಲ್ಲಿ ಹಿದಾಯತುಲ್ ಇಸ್ಲಾಂ ಮದ್ರಸದ ಸದರ್ ಮುಹಲ್ಲಿಮ್ ಫತಹುಲ್ಲಾ ದಾರಿಮಿ ದುಃವಾಶೀರ್ವಚನ ಮಾಡುವ ಮೂಲಕ ರಕ್ತದಾನ ಶಿಬಿರವನ್ನು ಉದ್ಘಾಟಿಸಿದರು.

ವೇದಿಕೆಯಲ್ಲಿ ಟಿ.ಅಬ್ದುಲ್ ಖಾದರ್, ಪಿ.ಕೆ ಉಮರಬ್ಬ, ಎಚ್.ಹಾಮದ್, ಹನೀಫ್ ಮುಸ್ಲಿಯಾರ್, ಇಬ್ರಾಹಿಂ ಪಲ್ಲ, ಎಸ್. ಕೆ.ರಿಯಾಝ್, ಮನ್ಸೂರ್ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ  ಮುಖ್ಯಸ್ಥರಾದ ನಾಸೀರ್ ಬಿ.ಸಿ ರೋಡ್, ಶಾಫಿ ಕಿನ್ಯ, ಶಮೀರ್ ಸೀಕೊ ಇತರರು ಉಪಸ್ಥಿತರಿದ್ದರು.

ಈ ಸಂದರ್ಭ ಅಬ್ದುಲ್ ಖಾದರ್ ರವರು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ತಂಡಕ್ಕೆ ಸ್ಮರಣಿಕೆ ನೀಡಿ ಗೌರವಿಸಿದ್ದಾರೆ.
ಕಾರ್ಯಕ್ರಮದಲ್ಲಿ ಜೊತೆಯಾದವರಿಗೆ ಬ್ಲಡ್ ಹೆಲ್ಪ್ ಲೈನ್ ಕೃತಜ್ಞತೆಯನ್ನು ಸಲ್ಲಿಸಿದೆ.

ಮೋದಿ ಸರಕಾರವು ರೈತ ವಿರೋಧಿಯೇ?

This poll has been finished and no longer available to vote !

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group