ಜಿಲ್ಲಾ ಸುದ್ದಿ

ಜಗದೀಶ್ ಕಾರಂತ್ ವಿರುದ್ಧ ಕ್ರಮ ಕೈಗೊಳ್ಳಲು ಮುಸ್ಲಿಂ ಸಂಘಟನೆಗಳ ಒಕ್ಕೂಟ ಮನವಿ

ವರದಿಗಾರ-ಮಂಗಳೂರು: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕೋಮು ಪ್ರಚೋದಣಾ ಭಾಷಣ ಮಾಡಿ ಶಾಂತಿ ಕದಡಲು ಪ್ರಯತ್ನಿಸಿದ ಹಾಗೂ ಕೋಮುಗಲಭೆ ನಡೆಸಲು ಪ್ರೇರೇಪಿಸಿ, ತನ್ನ ಭಾಷಣದಲ್ಲಿ   ಪುತ್ತೂರು ನಗರ ಠಾಣೆಯ ಪೊಲೀಸ್  ಇನ್ಸ್ ಪೆಕ್ಟರ್ ಅಬ್ದುಲ್ ಖಾದರ್ ರನ್ನು ಅಸಭ್ಯ ಪದಗಳಿಂದ ಅವಹೇಳಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ  ಜಗದೀಶ್ ಕಾರಂತ್ ರ ಮೇಲೆ ಪ್ರಕರಣ ದಾಖಲಿಸಿ,  ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮುಸ್ಲಿಮ್ ಸಂಘಟನೆಗಳ ಒಕ್ಕೂಟವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಐ.ಜಿ ಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ನಿಯೋಗದ ಮನವಿಗೆ ಸ್ಪಂದಿಸಿದ ಅಧಿಕಾರಿಗಳು  ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಘಟನೆಯ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ನಿಯೋಗದಲ್ಲಿ ಮುಸ್ಲಿಮ್ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ, ಮಾಜಿ ಮೇಯರ್ ಕೆ.ಅಶ್ರಫ್, ಹಾರಿಸ್ ಬೈಕಂಪಾಡಿ, ಜಲೀಲ್ ಕೃಷ್ಣಾಪುರ, ಮುಸ್ತಫಾ ಇದ್ದರು.
'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group