ರಾಷ್ಟ್ರೀಯ ಸುದ್ದಿ

ವಾಟ್ಸಪ್ ನಲ್ಲಿ ಬರುವ ಎಲ್ಲಾ ಸಂದೇಶಗಳನ್ನು ನಂಬಬೇಡಿ, ಫಾರ್ವರ್ಡ್ ಮಾಡಬೇಡಿ : ರಾಜನಾಥ್ ಸಿಂಗ್

ವರದಿಗಾರ-ದೆಹಲಿ: ರಾಷ್ಟ್ರವಿರೋಧಿಗಳು ಸಾಮಾಜಿಕ ತಾಣದಲ್ಲಿ ಖಚಿತವಲ್ಲದ ಮಾಹಿತಿಗಳನ್ನು ಹರಿಯ ಬಿಡುತ್ತಿದ್ದು, ಸಮಾಜದ ಸ್ವಾಸ್ಥ್ಯ ಕೆಡಿಸಲು ಪ್ರಯತ್ನಿಸುತ್ತಿರುವುದರಿಂದ ವಾಟ್ಸಪ್ ನಲ್ಲಿ ಬರುವ ಎಲ್ಲಾ ಸಂದೇಶಗಳನ್ನು ನಂಬಬೇಡಿ ಮತ್ತು ಬಂದಂತಹ ಸಂದೇಶಗಳನ್ನು ಖಚಿತಪಡಿಸಿಕೊಳ್ಳದೆ ಫಾರ್ವರ್ಡ್ ಮಾಡಬೇಡಿ ಎಂದು ಕೇಂದ್ರ ಗ್ರಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಅವರು ಸಶಸ್ತ್ರ ಸೀಮಾ ಬಲ್ ಗುಪ್ತಚರ ಘಟಕದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಮೇಲಿನ ಹೇಳಿಕೆಯನ್ನು ನೀಡಿದ್ದಾರೆ.

ಸುಳ್ಳು ಹಾಗೂ ಆಧಾರ ರಹಿತ ಮಾಹಿತಿಗಳನ್ನು ಸಾಮಾಜಿಕ ತಾಣದಲ್ಲಿ ಹಂಚಲಾಗುತ್ತಿದೆ. ಹಂಚಲಾದ ಮಾಹಿತಿಯನ್ನು ಜನರು  ಅದೇ ಸತ್ಯವೆಂದು ಭಾವಿಸುತ್ತಿದ್ದಾರೆ. ಆದರೆ ಇಂತಹ ಮಾಹಿತಿಗಳನ್ನು ನಂಬುವ ಮತ್ತು ಫಾರ್ವರ್ಡ್ ಮಾಡುವ ಮೊದಲು ಖಚಿತಪಡಿಸಿಕೊಳ್ಳುವುದು ಉತ್ತಮ ಹಾಗೂ ಇಂತಹ ಮಾಹಿತಿಗಳನ್ನು ಫಾರ್ವರ್ಡ್ ಮಾಡುವ ಸಂದರ್ಭ ಎಚ್ಚರಿಕೆಯನ್ನು ವಹಿಸಿಕೊಳ್ಳಬೇಕೆಂದು ಹೇಳಿದ್ದಾರೆ.

ಮೋದಿ ಸರಕಾರವು ರೈತ ವಿರೋಧಿಯೇ?

This poll has been finished and no longer available to vote !

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group