ರಾಜ್ಯ ಸುದ್ದಿ

ದಲಿತರಿಗೆ ಮನೆಗೆ ಹೋಗಲು ದಾರಿ ಬಿಡುವುದಿಲ್ಲ ಎನ್ನುವುದಾದರೆ ನಾವು ಇನ್ನೂ ಯಾವ ಕಾಲದಲ್ಲಿ ಬದುಕುತ್ತಿದ್ದೇವೆ? -ಷಡಕ್ಷರಮುನಿ ಸ್ವಾಮೀಜಿ ಪ್ರಶ್ನೆ

ವರದಿಗಾರ-ಹಿರಿಯೂರು: ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಇದು ಖಂಡನೀಯ. ದಲಿತರಿಗೆ ಮನೆಗೆ ಹೋಗಲು ದಾರಿ ಬಿಡುವುದಿಲ್ಲ ಎನ್ನುವುದಾದರೆ ನಾವು ಇನ್ನೂ ಯಾವ ಕಾಲದಲ್ಲಿ ಬದುಕುತ್ತಿದ್ದೇವೆ ಎಂದು ಷಡಕ್ಷರಮುನಿ ಸ್ವಾಮೀಜಿ ಪ್ರಶ್ನಿಸಿದ್ದಾರೆ.

ಚಿಗಳಿಕಟ್ಟೆ ಗ್ರಾಮದಲ್ಲಿ ದಲಿತ ಕಾಲೊನಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಮೇಲ್ಜಾತಿಯ ವ್ಯಕ್ತಿಯೊಬ್ಬ ಮುಳ್ಳು ಬೇಲಿ ಹಾಕಿ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆದಿಜಾಂಬವ ಮಠದ ಮಾರ್ಕಾಂಡ ಮುನಿ ಸ್ವಾಮೀಜಿ ಹಾಗೂ ಷಡಕ್ಷರಮುನಿ ಸ್ವಾಮೀಜಿ ಮಂಗಳವಾರ ಸಂಜೆ ಇಲ್ಲಿಗೆ ಭೇಟಿ ನೀಡಿ ಕಾಲೊನಿ ಜನತೆಯೊಂದಿಗೆ ಚರ್ಚಿಸಿದ್ದಾರೆ.

ವೈಯಕ್ತಿಕ ದ್ವೇಷ ಮತ್ತು ಅಸೂಯೆಗಳಿಂದ ಜಾತಿಗಳ ನಡುವೆ ದ್ವೇಷದ ವಿಷ ಬೀಜ ಬಿತ್ತುವುದು ಮತ್ತು ಆ ಹೆಸರಿನಲ್ಲಿ ಸಾರ್ವಜನಿಕ ನೆಮ್ಮದಿ ಹಾಳು ಮಾಡುವುದು ಸರಿಯಲ್ಲವೆಂದು ಅವರು ಹೇಳಿದ್ದಾರೆ . ಮಾದಿಗ ಸಮಾಜದ ಜನರು ಹಿಂದಿನಿಂದಲೂ ತಮ್ಮ ಕಾಲೊನಿಗೆ ಹೋಗಲು ಇದೇ ರಸ್ತೆಯನ್ನು ಬಳಸುತ್ತಿದ್ದರು. ಈಗ ಮುಳ್ಳು ಬೇಲಿ ಹಾಕಿ ಅಡ್ಡಿ ಮಾಡುತ್ತಿರುವುದು ಯಾವ ಸಂಸ್ಕೃತಿಯನ್ನು ತೋರಿಸುತ್ತದೆ ಎಂದು ಸ್ವಾಮೀಜಿ ಪ್ರಶ್ನಿಸಿದ್ದಾರೆ.

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Click to comment

You must be logged in to post a comment Login

Leave a Reply

The Latest

ಮೂವರು ಸಮಾನ ಮನಸ್ಕ ಸ್ನೇಹಿತರ ಸಮಾಜಕ್ಕೇನಾದರೂ ಒಳಿತು ಮಾಡಬೇಕೆಂಬ ತುಡಿತವೇ 'ವರದಿಗಾರ'

ಪತ್ರಿಕೆಯ ಒಳಗಿನ ಪುಟಗಳ ಸಣ್ಣ ಕಾಲಂಗಳಲ್ಲಿ ಅಡಗಿ ಹೋದ, ಸುಳ್ಳನ್ನು ಅಬ್ಬರಿಸಿ ದಿಕ್ಕು ತಪ್ಪಿಸುವ ಮಾಧ್ಯಮದ ಪ್ರಯತ್ನದ ನಡುವೆ ಸದ್ದಿಲ್ಲದೆ ತೆರೆಮರೆಯಲ್ಲಿ ಅಡಗಿ ಹೋದ ಸತ್ಯವನ್ನು ಜಾಲಾಡಿ ನಿಮ್ಮ ಮುಂದೆ ತರುವುದೇ 'ವರದಿಗಾರ'ನ ಪ್ರಯತ್ನ .

'ವರದಿಗಾರ' ನಿಮಗೆ ಆಪ್ತವೇ?? ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

To Top
error: Content is protected !!
WhatsApp Join our WhatsApp group