ವರದಿಗಾರ-ಮಂಗಳೂರು: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾಕಾರಿ ಮತ್ತು ಪೊಲೀಸ್ ಅಧಿಕಾರಿಯ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿದ್ದಾರೆ.
ಅವರು ಜಿಲ್ಲಾ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪಶ್ಚಿಮ ವಲಯ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಡಿ ನೀಡಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದರು.
ಇದೇ ಸಂದರ್ಭ ಜಗದೀಶ್ ಕಾರಂತ್ ವಿರುದ್ಧ ಪ್ರಕರಣ ದಾಖಲಿಸದೇ ಇರುವುದನ್ನು ಪೊಲೀಸ್ ವರಿಷ್ಠಾಧಿಕಾರಿಯೊಂದಿಗೆ ಪ್ರಶ್ನಿಸಿದ್ದಾರೆ.
