ವರದಿಗಾರ-ಮಂಗಳೂರು: ಸೆಪ್ಟೆಂಬರ್ 15ರಂದು ವಿವಿಧ ಹಿಂದೂ ಸಂಘಟನೆಗಳು ಪುತ್ತೂರಿನಲ್ಲಿ, ಇಲ್ಲಿನ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಖಾದರ್ ಹಿಂದೂ ವಿರೋಧಿ ನಿಲುವು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಸುರತ್ಕಲ್ ಮಾದರಿಯ ಕೋಮು ಗಲಭೆ ನಡೆಸುವುದಾಗಿ ಪ್ರಚೋದನಕಾರಿ ಭಾಷಣ ಮಾಡಿದ್ದ ಮತ್ತು ಪೊಲೀಸ್ ಅಧಿಕಾರಿಯನ್ನು ತಲೆ ಬೋಳಿಸಿ, ಬೆತ್ತಲೆ ಮಾಡಿ ಕತ್ತೆ ಮೇಲೆ ಮೆರವಣಿಗೆ ಮಾಡುವುದಾಗಿ ಬಹಿರಂಗ ಬೆದರಿಕೆ ಹಾಕಿದ್ದ ಹಿಂದೂ ಜಾಗರಣ ವೇದಿಕೆ ಕ್ಷೇತ್ರೀಯ ಸಂಘಟನಾ ಸಂಚಾಲಕ ಜಗದೀಶ್ ಕಾರಂತ್ ವಿರುದ್ಧ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್ಐಆರ್) ಪ್ರಕರಣ ದಾಖಲಿಸಿದ್ದಾರೆ.
ಪ್ರತಿಭಟನಾ ಸಭೆಯಲ್ಲಿ ಜಗದೀಶ್ ಕಾರಂತ್ ಮಾಡಿದ್ದ ಭಾಷಣದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಲವರು ಕೋಮು ಪ್ರಚೋದನಾ ಭಾಷಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು ಮತ್ತು ಇಲಾಖೆ ಸ್ವಯಂ ಪ್ರೇರಿತ ದೂರು ದಾಖಲಿಸಿ, ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತ್ತು. ಸಮಾಜದ ಸ್ವಾಸ್ಥ್ಯ ಕಡಿಸುವ, ಅವಹೇಳನಾಕಾರಿ ಭಾಷಣ ಮಾಡಿದ ಜಗದೀಶ್ ಕಾರಂತ್ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಎಸ್.ಡಿ.ಪಿ.ಐ ಪಕ್ಷವು ಪುತ್ತೂರಿನಲ್ಲಿ ಪ್ರತಿಭಟಿಸಿತ್ತು ಮತ್ತು ಈ ಬಗ್ಗೆ ಹಲವು ಸಂಘಟನೆಗಳು ಪೊಲೀಸ್ ಇಲಾಖೆ ಹಾಗೂ ಜನಪ್ರತಿನಿಧಿಗಳನ್ನು ಒತ್ತಾಯಿಸಿದ್ದರು.
ಬುಧವಾರ ಮಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಗೃಹ ಸಚಿವ ರಾಮಲಿಂಗಾ ರೆಡ್ಡಿ, ಜಗದೀಶ್ ಕಾರಂತ್ ವಿರುದ್ಧ ಪ್ರಕರಣ ದಾಖಲಿಸದೇ ಇರುವುದರ ಬಗ್ಗೆಯೂ ಇಲಾಖೆಯೊಂದಿಗೆ ಪ್ರಶ್ನಿಸಿದ್ದರು ಮತ್ತು ತಕ್ಷಣವೇ ಎಫ್ಐಆರ್ ದಾಖಲಿಸುವಂತೆ ದಕ್ಷಿಣ ಕನ್ನಡ ಎಸ್ಪಿ ಸಿ.ಎಚ್.ಸುಧೀರ್ಕುಮಾರ್ ರೆಡ್ಡಿ ಅವರಿಗೆ ನಿರ್ದೇಶನ ನೀಡಿದ್ದರು.
ಕಾರಂತ್ ವಿರುದ್ಧ ವಿವಿಧ ಧರ್ಮದ ಜನರ ನಡುವೆ ದ್ವೇಷ ಬಿತ್ತುವಂತಹ ಭಾಷಣ ಮಾಡಿರುವುದು (ಐಪಿಸಿ ಸೆಕ್ಷನ್ 5050(1)ಸಿ ), ಕೋಮು ದ್ವೇಷ ಹಬ್ಬಿಸಲು ಯತ್ನಿಸಿರುವುದು, ಜನಾಂಗ, ಧರ್ಮ, ಜಾತಿ ಆಧಾರದಲ್ಲಿ ಜನರ ನಡುವೆ ದ್ವೇಷ ಬಿತ್ತಲು ಯತ್ನ (ಐಪಿಸಿ ಸೆಕ್ಷನ್ 505(2)), ಭಾಷಣ, ಸಂಜ್ಞೆ ಅಥವಾ ದೃಶ್ಯಾವಳಿಗಳ ಮೂಲಕ ಕೋಮುದ್ವೇಷ ಹಬ್ಬಿಸಲು ಯತ್ನಿಸಿರುವುದು (ಐಪಿಸಿ ಸೆಕ್ಷನ್ 153(ಎ)) ಮತ್ತು ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ ನಡೆಸಿ, ಗಾಯಗೊಳಿಸುವುದಾಗಿ ಬೆದರಿಕೆ ಹಾಕಿರುವ ಆರೋಪದ ಮೇಲೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಗದೀಶ್ ಕಾರಂತ್ ಮಾಡಿದ್ದ ಭಾಷಣ:
