ವರದಿಗಾರ-ಚೆನ್ನೈ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ದೇಶದ ಒಕ್ಕೂಟ ವ್ಯವಸ್ಥೆಯನ್ನು ನಾಶಪಡಿಸಲು ಪ್ರಯತ್ನಿಸುತ್ತಿದೆ ಎಂದು ಕೇರಳ ರಾಜ್ಯ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ
ಅವರು ಶುಕ್ರವಾರ ವಿದುತಲೈ ಚಿರುದಗಳ್ ಕಚ್ಚಿಯಲ್ಲಿ ಆಯೋಜಿಸಿದ್ದ ರಾಜ್ಯ ಸ್ವಾಯತ್ತ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.
ದೇಶದ ಮೇಲೆ ‘ಹಿಂದು, ಹಿಂದಿ, ಹಿಂದೂಸ್ತಾನ’ ಎಂಬ ಏಕರೂಪ ವ್ಯವಸ್ಥೆಯನ್ನು ಹೇರಲು ಆರೆಸ್ಸೆಸ್ ನಿರಂತರವಾಗಿ ಪ್ರಯತ್ನಿಸುತ್ತಿದೆ. ಮತ್ತು ಬಹುಸಂಸ್ಕೃತಿಯನ್ನು ಒಪ್ಪಿಕೊಳ್ಳದ ಆರೆಸ್ಸೆಸ್, ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರಲು ಬಯಸುತ್ತಿದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.
